alex Certify
ಕನ್ನಡ ದುನಿಯಾ       Mobile App
       

Kannada Duniya

ದಕ್ಷಿಣ ಕೊರಿಯಾದಲ್ಲಿ ಭೀಕರ ಬೆಂಕಿ ದುರಂತ

ದಕ್ಷಿಣ ಕೊರಿಯಾದ ಆಸ್ಪತ್ರೆಯೊಂದರಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. 33 ಮಂದಿ ಬೆಂಕಿಯ ಕೆನ್ನಾಲಗೆಯಲ್ಲಿ ಸುಟ್ಟು ಕರಕಲಾಗಿದ್ದಾರೆ. 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಳೆದ ಒಂದು ದಶಕದಲ್ಲಿ ದಕ್ಷಿಣ ಕೊರಿಯಾದಲ್ಲಿ ಸಂಭವಿಸಿದ ಅತಿ ದೊಡ್ಡ ಅಗ್ನಿ ಅವಘಡ ಇದಾಗಿದೆ.

ಮಿರ್ಯಾಂಗ್ ಪ್ರದೇಶದಲ್ಲಿರುವ ಆಸ್ಪತ್ರೆಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿತ್ತು. ಹೆಲಿಕಾಪ್ಟರ್ ಗಳನ್ನು ಕೂಡ ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ. ಆಸ್ಪತ್ರೆಯಲ್ಲಿ ಸಿಲುಕಿಕೊಂಡಿದ್ದವರು ಹಗ್ಗಗಳ ಮೂಲಕ ಪಾರಾಗಿ ಬಂದಿದ್ದಾರೆ. ಆಸ್ಪತ್ರೆಯ ಎಮರ್ಜೆನ್ಸಿ ರೂಮ್ ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು.

ಗಾಯಾಳುಗಳಲ್ಲಿ 13 ಜನರ ಸ್ಥಿತಿ ಚಿಂತಾಜನಕವಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಐಸಿಯುನಲ್ಲಿದ್ದ 15 ರೋಗಿಗಳನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಆಸ್ಪತ್ರೆಯ ಮೊದಲ ಮತ್ತು ಎರಡನೇ ಮಹಡಿಯಲ್ಲಿ ಸಿಕ್ಕಿಕೊಂಡಿದ್ದ ರೋಗಿಗಳು ಮೃತಪಟ್ಟಿದ್ದಾರೆ. ಬೆಂಕಿ ಕಾಣಿಸಿಕೊಂಡಾಗ ಸಿಜೊಂಗ್ ಆಸ್ಪತ್ರೆಯಲ್ಲಿ ಸುಮಾರು 200 ಜನರಿದ್ರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...