alex Certify
ಕನ್ನಡ ದುನಿಯಾ       Mobile App
       

Kannada Duniya

ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ಇನ್ನಿಲ್ಲ

sushil-koirala1

ಅನಾರೋಗ್ಯದಿಂದ ಬಳಲುತ್ತಿದ್ದ ನೇಪಾಳದ ಮಾಜಿ ಪ್ರಧಾನಿ ಸುಶೀಲ್ ಕೊಯಿರಾಲ ಅವರು ಸೋಮವಾರ ಮಧ್ಯರಾತ್ರಿ 12.50 ರ ಸುಮಾರಿಗೆ ಕಠ್ಮಂಡುವಿನ ತಮ್ಮ ಮಹಾರಾಜ್‌ ಗಂಜ್ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ನೇಪಾಳಿ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿದ್ದ 78 ವರ್ಷದ ಸುಶೀಲ್ ಕೊಯಿರಾಲ ಕ್ಯಾನ್ಸರ್ ಮತ್ತು ನ್ಯುಮೋನಿಯಾದಿಂದ ಬಳಲುತ್ತಿದ್ದರು. 2014 ರಲ್ಲಿ ನೇಪಾಳದ ಪ್ರಧಾನಿಯಾಗಿ ಆಯ್ಕೆಯಾಗಿದ್ದ ಅವರು, 2015 ರ ಅಕ್ಟೋಬರ್‌ ‌ನಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಅಚ್ಚರಿಗೆ ಕಾರಣರಾಗಿದ್ದರು.

ವಿಶೇಷವೆಂದರೆ ನೇಪಾಳಿ ಕಾಂಗ್ರೆಸ್‌ ಪಕ್ಷದಿಂದ ಪ್ರೇರಿತರಾಗಿದ್ದ ಸುಶೀಲ್ 1954 ರಿಂದ ರಾಜಕೀಯದಲ್ಲಿ ತೊಡಗಿಸಿಕೊಂಡು ಹಲವು ಜನಪರ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಜನರ ಪ್ರೀತಿಗೆ ಕಾರಣರಾಗಿದ್ದರು. ಅಲ್ಲದೇ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಸುಶೀಲ್ ಕೊಯಿರಾಲ, ಉಭಯ ದೇಶಗಳ ನಡುವೆ ಒಳ್ಳೆಯ ಸಂಬಂಧವನ್ನು ಕಲ್ಪಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು ಎಂಬುದನ್ನಿಲ್ಲಿ ಸ್ಮರಿಸಬಹುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...