alex Certify
ಕನ್ನಡ ದುನಿಯಾ       Mobile App
       

Kannada Duniya

ಗ್ಯಾಂಗ್ ರೇಪ್ ವಿಡಿಯೋ ಪೋಸ್ಟ್ ಮಾಡಿದವರಿಗಾಗಿ ಹುಡುಕಾಟ

ದಕ್ಷಿಣ ಫ್ರಾನ್ಸ್ ನ ನೈಟ್ ಕ್ಲಬ್‌ ಒಂದರ ಹೊರಭಾಗದಲ್ಲಿ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರಗೈದು ಆ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ ನಾಲ್ಕು ಮಂದಿ ಕಾಮುಕರಿಗಾಗಿ ಫ್ರಾನ್ಸ್ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

19 ವರ್ಷದ ಯುವತಿಯ ವಿಡಿಯೋವನ್ನು ಸ್ನಾಪ್‌ಚಾಟ್ ಹಾಗೂ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿತ್ತು. ಆ ವಿಡಿಯೋಕ್ಕೆ ಟ್ವೀಟಿಗರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಕಾಮುಕರ ಗುರುತು ತಮಗಿದೆ ಎಂದು ಅನೇಕರು ಹೇಳಿಕೊಂಡಿದ್ದರು. ಅತ್ಯಾಚಾರವೆಸಗಿದವರನ್ನು 25 ರಿಂದ 30 ವಯಸ್ಸಿನವರೆಂದು ಗುರುತಿಸಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಆರೋಪಿಗಳ ತಲಾಶ್ ಆರಂಭಿಸಿದ್ದಾರೆ.

ಅತ್ಯಾಚಾರಗಳ ವಿಡಿಯೋಗಳು ಆನ್‌ಲೈನ್‌ನಲ್ಲಿ ಹೆಚ್ಚುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ. ಸಾಮಾಜಿಕ ಜಾಲತಾಣ ಹಾಗೂ ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಿದಂತೆ ಈ ಪಿಡುಗು ಹೆಚ್ಚಿದೆ. ಅಮೆರಿಕ, ಬ್ರೆಜಿಲ್ ಹಾಗೂ ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ಇದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...