alex Certify
ಕನ್ನಡ ದುನಿಯಾ       Mobile App
       

Kannada Duniya

ಜರ್ಮನಿಯಲ್ಲಿ ಗುಂಡಿನ ದಾಳಿಗೆ ಇಬ್ಬರು ಬಲಿ

germani-firing

ವಿಯೆನ್ನಾ: ಜರ್ಮನಿಯಲ್ಲಿ ಬಂದೂಕುಧಾರಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ್ದು, ಇಬ್ಬರು ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾಡೆನ್ ವುಟೆನ್ ಬರ್ಗ್ ರಾಜ್ಯದ ಕೊನ್ಸ್ ಟಾನ್ ನಗರದಲ್ಲಿರುವ ಡಿಸ್ಕೋದಲ್ಲಿ ಜನರೆಲ್ಲ ಸೇರಿದ್ದ ಸಂದರ್ಭದಲ್ಲಿ ನುಗ್ಗಿದ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ದಾಳಿ ನಡೆಸಿದ ದುಷ್ಕರ್ಮಿಯನ್ನು ಬಂಧಿಸಲು ಮುಂದಾಗಿದ್ದಾರೆ. ಆತ ಪೊಲೀಸರ ಮೇಲೆಯೂ ದಾಳಿ ಮಾಡಿದ್ದಾನೆ.

ಪೊಲೀಸರು ನಡೆಸಿದ ಪ್ರತಿ ದಾಳಿಯಲ್ಲಿ ದುಷ್ಕರ್ಮಿ ಮೃತಪಟ್ಟಿದ್ದಾನೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...