alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ಪ್ರಧಾನಿಗೆ ಕೊನೆ ಕ್ಷಣದಲ್ಲಿ ‘ಶಾಕ್’ ಕೊಟ್ಟ ಭಾರತ ಸರ್ಕಾರ

ನ್ಯೂಯಾರ್ಕ್ ನಲ್ಲಿ ಆಯೋಜಿಸಿದ್ದ ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಮಾತುಕತೆಯನ್ನು ಕೊನೆ ಕ್ಷಣದಲ್ಲಿ ಭಾರತ‌ ರದ್ದುಗೊಳಿಸಿದೆ.

ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಅವರ ಅಸಲಿ ಮುಖವಾಡ ಬಯಲಾದ ಹಿನ್ನಲೆಯಲ್ಲಿ ಎರಡು ರಾಷ್ಟ್ರಗಳ ವಿದೇಶಾಂಗ ಸಚಿವರ ಮಾತುಕತೆಯನ್ನು ರದ್ದುಗೊಳಿಸಲಾಗಿದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಒಂದೆಡೆ ಮಾತುಕತೆ ಎನ್ನುತ್ತಾರೆ. ಇನ್ನೊಂದೆಡೆ ಗಡಿ ಭಾಗದಲ್ಲಿ ಭಾರತದ ಯೋಧರನ್ನು ಕೊಲೆ ಮಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಶಾಂತಿಯ ಮಾತುಕತೆ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನ ಪ್ರಧಾನಿ ಹಾಗೂ ವಿದೇಶಾಂಗ ಸಚಿವರ ಪತ್ರದ ಬೆನ್ನಲ್ಲೆ ಈ‌ ಮಾತುಕತೆ ನಡೆಸಲು ನಿರ್ಧರಿಸಲಾಯಿತು.‌ ಆದರೆ ಗಡಿ ತಂಟೆ ಮುಂದುವರೆದಿರುವುದರಿಂದ ಕೊನೆ ಕ್ಷಣದಲ್ಲಿ‌ ಭಾರತ ಮಾತುಕತೆಯನ್ನು ರದ್ದುಗೊಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...