alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂಬೈ ದಾಳಿಯ ಸಂಚುಕೋರ ರಾಜಕೀಯಕ್ಕೆ ಎಂಟ್ರಿ

ಲಾಹೋರ್: ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್ ರಾಜಕೀಯಕ್ಕೆ ಎಂಟ್ರಿ ಕೊಡಲು ಮುಂದಾಗಿದ್ದಾನೆ. ತೀವ್ರ ಒತ್ತಡದ ಕಾರಣ ಪಾಕಿಸ್ತಾನ ಸರ್ಕಾರ ಆತನನ್ನು ಮತ್ತೆ ಬಂಧಿಸಿದೆ ಎಂದು ಹೇಳಿತ್ತಾದರೂ, ಹಫೀಜ್ ಸಯೀದ್ ರಾಜಕಾರಣಕ್ಕೆ ಎಂಟ್ರಿ ಕೊಡುವುದಾಗಿ ಹೇಳಿರುವುದು ಆತನನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆಯೇ ಎಂಬ ಪ್ರಶ್ನೆ ಮೂಡಿಸಿದೆ.

ಜಾಗತಿಕ ಭಯೋತ್ಪಾದಕನೆಂದು ಘೋಷಿಸಲಾಗಿರುವ ಉಗ್ರ ಹಫೀಜ್ ಸಯೀದ್ 2018 ರ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾನೆ.

ಮಿಲ್ಲಿ ಮುಸ್ಲಿಂ ಲೀಗ್ ಪಕ್ಷದಿಂದ ಕಣಕ್ಕಿಳಿಯುವುದಾಗಿ ಆತ ತಿಳಿಸಿದ್ದು, ಪಕ್ಷದ ಮಾನ್ಯತೆ, ಚುನಾವಣೆಗೆ ಸ್ಪರ್ಧಿಸುವ ಕುರಿತಾಗಿ ಈಗಾಗಲೇ ಪ್ರಕ್ರಿಯೆ ಆರಂಭಿಸಿದ್ದಾನೆ.

ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವ ಕಾಶ್ಮೀರಿಗಳನ್ನು ಬೆಂಬಲಿಸುವ ಉದ್ದೇಶದಿಂದ ಮಿಲ್ಲಿ ಮುಸ್ಲಿಂ ಲೀಗ್ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಲಾಹೋರ್ ನ ಚೌಬಾರ್ಡಿ ಜ್ಯೂಡಿ ಪ್ರಧಾನ ಕಚೇರಿಯಲ್ಲಿ ಆತ ಹೇಳಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...