alex Certify
ಕನ್ನಡ ದುನಿಯಾ       Mobile App
       

Kannada Duniya

ಪವಾಡಸದೃಶ್ಯ ರೀತಿಯಲ್ಲಿ ಪಾರಾಗಿದ್ದಾನೆ ಯುವಕ

ಬೃಹತ್ ಟ್ರಕ್ ಒಂದು ಮೋಟಾರ್ ಬೈಕ್ ಸವಾರನಿಗೆ ಢಿಕ್ಕಿ ಹೊಡೆದಿದ್ದು, ಸವಾರ, ಟ್ರಕ್ ಮಧ್ಯಕ್ಕೆ ಸಿಲುಕಿದರೂ ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪವಾಡಸದೃಶ್ಯ ರೀತಿಯಲ್ಲಿ ಪಾರಾಗಿದ್ದಾನೆ.

ಚೀನಾದ ಜಿಯಾಂಗ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬರುತ್ತಿದ್ದ ಯುವಕನೊಬ್ಬ ರಸ್ತೆ ಕ್ರಾಸ್ ಮಾಡಲು ಯತ್ನಿಸಿದ್ದು, ನೇರ ಟ್ರಕ್ ಕೆಳಗೆ ಹೋಗಿದ್ದಾನೆ. ಆದರೆ ಪವಾಡವೆಂಬಂತೆ ಆತ ಹೊರ ಬಂದಿದ್ದು, ಆತನ ಬೈಕನ್ನು ಟ್ರಕ್ ಹಲವು ಮೀಟರ್ ದೂರಕ್ಕೆ ಎಳೆದುಕೊಂಡು ಹೋಗಿದೆ.

ಬೈಕ್ ಸವಾರ ತಾನು ಸಿಲುಕಿದ್ದ ಟ್ರಕ್ ಅಡಿಯಿಂದ ಹೊರ ಬಂದ ವೇಳೆ ಮತ್ತೊಂದು ಟ್ರಕ್ ಹಾದು ಹೋಗಿದ್ದು, ಆದರೆ ಆತನಿಗೆ ಯಾವುದೇ ಅಪಾಯವಾಗಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಆತ ಪಾರಾಗಿದ್ದು, ಅಪಘಾತದ ದೃಶ್ಯ ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...