alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ನಲ್ಲೇ ಚಾಲಕಿ ಮೇಲೆ ನಡೀತು ಅಮಾನವೀಯ ಕೃತ್ಯ

china cc

ಬೀಜಿಂಗ್: ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣ ಇತ್ತೀಚೆಗೆ ಹೆಚ್ಚಾಗಿದ್ದು, ಚೀನಾದಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿಯೇ ಚಾಲಕಿಯ ಮೇಲೆ, ದುರುಳನೊಬ್ಬ ಅಮಾನವೀಯವಾಗಿ ವರ್ತಿಸಿದ ಘಟನೆ ವರದಿಯಾಗಿದೆ.

ಚೀನಾದ ಸಿಝೌ ಎಂಬಲ್ಲಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಕದ್ದುಮುಚ್ಚಿ ಸಿಗರೇಟು ಸೇದಿದ್ದು, ಇದನ್ನು ಗಮನಿಸಿದ ಚಾಲಕಿ ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ಇದರಿಂದ ಆಕ್ರೋಶಗೊಂಡ ಧೂಮಪಾನ ಮಾಡುತ್ತಿದ್ದ ವ್ಯಕ್ತಿ ಚಾಲಕಿಯ ಮೇಲೆ ಮನಸೋ ಇಚ್ಛೆ ಥಳಿಸಿದ್ದಾನೆ. ಬಸ್ ನಲ್ಲಿ ಸಿಗರೇಟ್ ಸೇದುತ್ತಿದ್ದ ಆತನಿಗೆ ಚಾಲಕಿ, ಸೇದಬಾರದೆಂದು ತಾಕೀತು ಮಾಡಿದ್ದಾಳೆ. ಇದಕ್ಕೆ ಸುಮ್ಮನಾಗದ ಆತ, ಚಾಲಕಿಯ ಮೇಲೆ ಹಲ್ಲೆ ಮಾಡಿದ್ದಾನೆ.

ಬಸ್ ನಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಈ ದೃಶ್ಯಗಳೆಲ್ಲಾ ಸೆರೆಯಾಗಿವೆ. ಸಾಮಾಜಿಕ ಜಾಲತಾಣಗಳಲ್ಲಿಯೂ, ಈ ವಿಡಿಯೋ ವೈರಲ್ ಆಗಿದ್ದು, ಅಪಾರ ಸಂಖ್ಯೆಯ ಜನ ವೀಕ್ಷಿಸಿದ್ದು, ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...