alex Certify
ಕನ್ನಡ ದುನಿಯಾ       Mobile App
       

Kannada Duniya

ಸರಳವಾಗಿ ನಡೆಯಲಿದೆ ಇಮ್ರಾನ್ ಪ್ರಮಾಣ ವಚನ: ಭಾಗಿಯಾಗಲ್ಲ ಅಮೀರ್

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಇಮ್ರಾನ್ ಖಾನ್ ಆಗಸ್ಟ್ 11 ರಂದು ಪದಗ್ರಹಣ ಮಾಡಲಿದ್ದಾರೆ. ಸರಳ ಸಮಾರಂಭದಲ್ಲಿ ಪ್ರಧಾನಿ ಹುದ್ದೆಗೇರುವ ನಿರ್ಧಾರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ವಿದೇಶಿ ರಾಜಕೀಯ ನಾಯಕರಿಗೆ ಆಹ್ವಾನ ನೀಡುವುದಿಲ್ಲ ಎನ್ನಲಾಗಿದೆ.

ಇಮ್ರಾನ್ ಖಾನ್ ಪದಗ್ರಹಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಾಲಿವುಡ್ ನಟ ಅಮೀರ್ ಖಾನ್, ಕ್ರಿಕೆಟರ್ ಕಪಿಲ್ ದೇವ್ ಹಾಗೂ ಗವಾಸ್ಕರ್ ಸೇರಿದಂತೆ ಅನೇಕರನ್ನು ಆಹ್ವಾನಿಸಲಿದ್ದಾರೆ ಎಂಬ ಸುದ್ದಿಯಿತ್ತು. ಆದ್ರೆ ಇಂದು ಇಮ್ರಾನ್ ಖಾನ್ ತಮ್ಮ ಅಭಿಪ್ರಾಯ ಬದಲಿಸಿದ್ದಾರೆ. ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ.

ವಿದೇಶದ ಯಾವುದೇ ನಾಯಕರು ಇದ್ರಲ್ಲಿ ಪಾಲ್ಗೊಳ್ಳುವುದಿಲ್ಲ.ಇಮ್ರಾನ್ ಖಾನ್ ಆಪ್ತ ಸ್ನೇಹಿತರು ಮಾತ್ರ ಸಮಾರಂಭಕ್ಕೆ ಬರಲಿದ್ದಾರಂತೆ. ಪ್ರಮಾಣವಚನ ಕಾರ್ಯಕ್ರಮಕ್ಕೆ ಹೆಚ್ಚಿನ ಹಣ ವ್ಯಯ ಮಾಡುವುದಿಲ್ಲವೆಂದು ಪಕ್ಷದ ಮೂಲಗಳು ಹೇಳಿವೆ.

ಈ ಬಗ್ಗೆ ಅಮೀರ್ ಖಾನ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇಮ್ರಾನ್ ಖಾನ್ ರಿಂದ ಯಾವುದೇ ಆಹ್ವಾನ ಬಂದಿಲ್ಲ. ಹಾಗೆ ನಾನು ಪಾಕಿಸ್ತಾನಕ್ಕೆ ಹೋಗುವುದಿಲ್ಲವೆಂದು ಅಮೀರ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...