alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ಪಾಕ್ ಪ್ರಧಾನಿಯಾಗಿ ಇಮ್ರಾನ್ ಪ್ರಮಾಣ ವಚನ

ಪಾಕಿಸ್ತಾನದ 22ನೇ ಪ್ರಧಾನಿಯಾಗಿ ಮಾಜಿ ಕ್ರಿಕೆಟಿಗ, ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಆಯ್ಕೆ ಆಗಿದ್ದಾರೆ.

ಶುಕ್ರವಾರ ಪಾಕಿಸ್ತಾನದ ಸಂಸತ್ತಿಗೆ ನೂತನವಾಗಿ ಆಯ್ಕೆಯಾದ ಸದಸ್ಯರು ಇಮ್ರಾನ್ ಖಾನ್ ರನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ. ಇಮ್ರಾನ್ ಖಾನ್ ಮ್ಯಾಜಿಕ್ ನಂಬರ್ ಗಿಂತಲೂ ನಾಲ್ಕು ಮತಗಳನ್ನು ಹೆಚ್ಚು ಪಡೆದಿದ್ದು, ಪ್ರಧಾನಿಯಾಗಿ ಆಯ್ಕೆ ಆಗಿದ್ದಾರೆ. ಇಮ್ರಾನ್ ವಿರುದ್ಧ ನಿಂತಿದ್ದ ಶೆಹಭಜ್ ಷರೀಫ್ ಅವರು ಸೋಲು ಕಂಡಿದ್ದಾರೆ.

ಪಾಕಿಸ್ತಾನದಲ್ಲಿ ಸರ್ಕಾರ ರಚಿಸಲು ಬೇಕಾಗಿರುವ ಮ್ಯಾಜಿಕ್ ನಂಬರ್ 172. ಈ ನಂಬರ್ ಇಮ್ರಾನ್ ಖಾನ್ ಮುಟ್ಟುತಾ ಇದ್ದಂತೆ ಭಾವುಕರಾದ್ರು. ಇಂದು ಇಮ್ರಾನ್ ಖಾನ್ ಪಾಕ್ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇಮ್ರಾನ್ ಖಾನ್ ಬೆಸ್ಟ್ ಆಲ್ರೌಂಡರ್. ಪಾಕಿಸ್ತಾನಕ್ಕೆ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ತಂಡಕ್ಕೆ ನೆರವಾದ ಪ್ಲೇಯರ್.  1992ರ ವಿಶ್ವಕಪ್ ನಲ್ಲಿ ಇಮ್ರಾನ್ ಖಾನ್ ಮುಂದಾಳತ್ವದ ಪಾಕಿಸ್ತಾನ ತಂಡ, ಇಂಗ್ಲೆಂಡ್ ತಂಡವನ್ನು ಮಣಿಸಿ, ಚೊಚ್ಚಲ ಬಾರಿಗೆ ವಿಶ್ವಕಪ್ ಗೆ ಮುತ್ತಿಟ್ಟಿತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...