alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಮಾಣ ವಚನ ಕಾರ್ಯಕ್ರಮ: ಮೋದಿಗೆ ಇಮ್ರಾನ್ ಆಹ್ವಾನ..?

ಪಾಕಿಸ್ತಾನದಲ್ಲಿ ಮುಂದಿನ ಪ್ರಧಾನಿಯಾಗಿ ಮಾಜಿ ಕ್ರಿಕೆಟರ್ ಹಾಗೂ ತೆಹ್ರೀಕ್-ಇ-ಇನ್ಸಾಫ್ ನಾಯಕ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸುವ ತಯಾರಿ ನಡೆಯುತ್ತಿದೆ.

ಪಿಟಿಐ ಜೊತೆ ಮಾತನಾಡಿದ ಪಕ್ಷದ ನಾಯಕರೊಬ್ಬರು, ಮೋದಿ ಆಹ್ವಾನದ ಬಗ್ಗೆ ಪಕ್ಷದ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಿದ್ದೇವೆಂದು ಹೇಳಿಕೆ ನೀಡಿದ್ದಾರೆ. ಇಮ್ರಾನ್ ಖಾನ್ ನೇತೃತ್ವದ ಪಕ್ಷ ನರೇಂದ್ರ ಮೋದಿ ದಾರಿ ತುಳಿಯಲು ನಿರ್ಧರಿಸಿದ್ದು ಸಾರ್ಕ್ ದೇಶಗಳ ನಾಯಕರನ್ನು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ.

2014ರಲ್ಲಿ ಪ್ರಧಾನ ಮಂತ್ರಿಯಾಗಿ ಮೋದಿ ಪ್ರಮಾಣ ವಚನ ಸ್ವೀಕರಿಸುವ ವೇಳೆ ಸಾರ್ಕ್ ದೇಶಗಳ ನಾಯಕರಿಗೆ ಆಹ್ವಾನ ನೀಡಿದ್ದರು. ಆಗಿನ ಪಾಕಿಸ್ತಾನದ ಪ್ರಧಾನಿ ನವಾಜ್ ಶರೀಫ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪಾಕಿಸ್ತಾನದಲ್ಲಿ ನಡೆದ ಸಾರ್ವಜನಿಕ ಚುನಾವಣೆಯಲ್ಲಿ ಇಮ್ರಾನ್ ಖಾನ್ ಪಕ್ಷ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಆದ್ರೆ ಪಕ್ಷಕ್ಕೆ ಬಹುಮತ ಬಂದಿಲ್ಲ. ಬಹುಮತವಿಲ್ಲದೆ ಹೋದ್ರೂ ಆಗಸ್ಟ್ 11ರಂದು ಪ್ರಮಾಣ ವಚನ ಸ್ವೀಕರಿಸುವುದಾಗಿ ಇಮ್ರಾನ್ ಖಾನ್ ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...