alex Certify
ಕನ್ನಡ ದುನಿಯಾ       Mobile App
       

Kannada Duniya

ಇಂಟರ್ ನೆಟ್ ಕುರಿತ ಕಳವಳಕಾರಿ ಮಾಹಿತಿ ಇಲ್ಲಿದೆ

internet 22

ನವದೆಹಲಿ: ವಿಶ್ವದಲ್ಲಿ ಕಂಪ್ಯೂಟರ್, ಲ್ಯಾಪ್ ಟಾಪ್, ಸ್ಮಾರ್ಟ್ ಫೋನ್ ಬಳಕೆ ಹೆಚ್ಚಾದಂತೆಲ್ಲಾ, ಇಂಟರ್ ನೆಟ್ ಬಳಕೆದಾರರ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗಿದೆ. ದೇಶದಲ್ಲಿ ಇಂಟರ್ ನೆಟ್ ಬಳಕೆದಾರರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಆದರೆ, ಅದಕ್ಕೆ ತಕ್ಕಂತೆ ನೆಟ್ ಸ್ಪೀಡ್ ಸಾಮರ್ಥ್ಯ ವೃದ್ಧಿಯಾಗಿಲ್ಲ.

ಏಷ್ಯಾ ಖಂಡದಲ್ಲಿಯೇ ಅತ್ಯಂತ ಕಡಿಮೆ ಇಂಟರ್ ನೆಟ್ ಸ್ಪೀಡ್ ಭಾರತದಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು, ಡಿಜಿಟಲ್ ಇಂಡಿಯಾ ಪರಿಕಲ್ಪನೆಯೊಂದಿಗೆ ದೇಶದಲ್ಲಿ ಹತ್ತು ಹಲವು ತಾಂತ್ರಿಕ ಯೋಜನೆಗಳನ್ನು ಜಾರಿಗೆ ತರುತ್ತಿದ್ದಾರೆ. ತಾಂತ್ರಿಕತೆಗೆ ಒತ್ತು ನೀಡಿದ್ದಾರೆ. ಆದರೆ, ಏಷ್ಯಾದ ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಇಂಟರ್ ನೆಟ್ ಸ್ಪೀಡ್ ತೀರಾ ಕಡಿಮೆಯಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ, ಕೇವಲ 2.8 Mbps ವೃದ್ಧಿಸಿಕೊಂಡಿದೆ ಎಂದು ಹೇಳಲಾಗಿದೆ.

ದಕ್ಷಿಣ ಕೊರಿಯಾದಲ್ಲಿ ಅತಿ ಹೆಚ್ಚು ಅಂದರೆ, 26.7 Mbps ಇಂಟರ್ ನೆಟ್ ಸಾಮರ್ಥ್ಯ ವೃದ್ಧಿಯಾಗಿದೆ. ಜಾಗತಿಕ ಮಟ್ಟದಲ್ಲಿ 8.6 Mbps ಹೆಚ್ಚಾಗಿದೆ. ಬೇರೆ ದೇಶಗಳಿಗೆ ಹೋಲಿಸಿ ನೋಡಿದಾಗ, 3 ಜಿ, 4 ಜಿ ಬಂದರೂ, ಭಾರತದ ಇಂಟರ್ ನೆಟ್ ಸ್ಪೀಡ್ ಅತಿ ಕಡಿಮೆಯಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...