alex Certify
ಕನ್ನಡ ದುನಿಯಾ       Mobile App
       

Kannada Duniya

ಡಿನ್ನರ್ ಡೇಟ್ ಗೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ಸಾವು

ವಿದ್ಯಾಭ್ಯಾಸಕ್ಕಾಗಿ ಆಸ್ಟ್ರೇಲಿಯಾಗೆ ತೆರಳಿದ್ದ 25 ವರ್ಷದ ಭಾರತೀಯ ವಿದ್ಯಾರ್ಥಿ ಮೌಲಿನ್ ರಾಥೋಡ್ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ.

ಆಸ್ಟ್ರೇಲಿಯಾದಲ್ಲಿ ವಾಣಿಜ್ಯ ಶಾಸ್ತ್ರವನ್ನು ಕಲಿಯುತ್ತಿದ್ದ.  ಇತ್ತೀಚೆಗಷ್ಟೇ ಆತನಿಗೆ ಡೇಟಿಂಗ್ ವೆಬ್ ಸೈಟ್ ಒಂದರ ಮೂಲಕ ಯುವತಿಯೊಬ್ಬಳು ಪರಿಚಯವಾಗಿದ್ದಳು. ಸೋಮವಾರ ರಾತ್ರಿ ಅಲ್ಲಿನ ಕಾಲಮಾನ ರಾತ್ರಿ 9 ಗಂಟೆ ಸುಮಾರಿಗೆ ಆಕೆಯ ಮನೆಗೆ ರಾಥೋಡ್ ಡಿನ್ನರ್ ಗಾಗಿ ತೆರಳಿದ್ದ. ಆನಂತರದಲ್ಲಿ ಆತ ಯುವತಿಯ ಮನೆಯಲ್ಲಿ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಪೊಲೀಸರಿಗೆ ಮಾಹಿತಿ ಕೊಟ್ಟದ್ದು ಯಾರು ಅನ್ನೋದು ಇನ್ನೂ ತಿಳಿದು ಬಂದಿಲ್ಲ. ಆದ್ರೆ ಯುವತಿಯ ಮನೆಗೆ ಬಂದ ಪೊಲೀಸರಿಗೆ ರಾಥೋಡ್ ತೀವ್ರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೂಡಲೇ ಪೊಲೀಸರು ಆತನನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣದ ಸಂಬಂಧ ಮತ್ತೊಬ್ಬ ಯುವಕನನ್ನು ಬಂಧಿಸಲಾಗಿದ್ದು, ಆತನೇ ರಾಥೋಡ್ ನನ್ನು ಥಳಿಸಿರುವ ಸಾಧ್ಯತೆ ಇದೆ ಅಂತ ಹೇಳಲಾಗ್ತಿದೆ.

ಪ್ರಕರಣದ ಸಂಬಂಧ 19 ವರ್ಷದ ಯುವತಿಯೊಬ್ಬಳನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ನಾಲ್ಲು ವರ್ಷಗಳ ಹಿಂದೆ ವಿದ್ಯಾಭ್ಯಾಸಕ್ಕಾಗಿ ಆಸ್ಟ್ರೇಲಿಯಾಗೆ ಬಂದಿದ್ದ ಮಗನ ಸ್ಥಿತಿ ನೋಡಿ ಹೆತ್ತವರಿಗೂ ಶಾಕ್ ಆಗಿದೆ. ಒಬ್ಬನೇ ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ ರಾಥೋಡ್ ಪೋಷಕರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...