alex Certify
ಕನ್ನಡ ದುನಿಯಾ       Mobile App
       

Kannada Duniya

ವಿದೇಶದಲ್ಲೂ ಭಾರತೀಯ ಸಂಸ್ಕೃತಿ ಮೆರೆದ ವಿದ್ಯಾರ್ಥಿ

596717-deanಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯ ಸಂಬಂಧಕ್ಕೆ ಬಹಳ ಮಹತ್ವವಿದೆ. ವಿದ್ಯೆ ಕಲಿಸಿದ ಗುರುಗಳನ್ನು ದೇವತಾ ಸಮಾನವಾಗಿ ಕಾಣಲಾಗುತ್ತದೆ. ತಾಯಿಯ ನಂತರದ ಸ್ಥಾನವನ್ನು ಗುರುವಿಗೆ ನೀಡಲಾಗಿದೆ.

ಭಾರತೀಯ ಸಂಸ್ಕೃತಿಯಲ್ಲಿ ಗುರು-ಹಿರಿಯರನ್ನು ಗೌರವಿಸಲು ಪಾದ ಮುಟ್ಟಿ ನಮಸ್ಕರಿಸುವ ಸಂಪ್ರದಾಯವಿದೆ. ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ವಿಶ್ವವಿದ್ಯಾನಿಲಯದ ಸಮಾರಂಭದಲ್ಲಿ ಡೀನ್ ಗೆ ಕಾಲು ಮುಟ್ಟಿ ನಮಸ್ಕರಿಸಿದ್ದು, ಆ ವಿಡಿಯೋವೀಗ ವೈರಲ್ ಆಗಿದೆ.

ಚಿಕಾಗೋದ ಇಲಿನಾಯನ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ವ್ಯಾಸಂಗ ಮಾಡುತ್ತಿರುವ ಈ ವಿದ್ಯಾರ್ಥಿ, ಸಮಾರಂಭವೊಂದರಲ್ಲಿ ವಿಶ್ವವಿದ್ಯಾನಿಲಯದ ಡೀನ್ ರ ಕಾಲು ಮುಟ್ಟಿ ನಮಸ್ಕರಿಸಿದ್ದಾನೆ. ಇದರಿಂದ ಕ್ಷಣಕಾಲ ಅವಾಕ್ಕಾದ ಅವರು ಬಳಿಕ ಭಾರತೀಯ ಸಂಸ್ಕೃತಿಯ ಮಹತ್ವವನ್ನು ಕೇಳಿ ತಿಳಿದುಕೊಂಡಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರತೀಯರ ಸಂಸ್ಕಾರದ ಕುರಿತು ಪ್ರಶಂಸೆ ವ್ಯಕ್ತವಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...