alex Certify
ಕನ್ನಡ ದುನಿಯಾ       Mobile App
       

Kannada Duniya

ಜಪಾನ್ ನಲ್ಲಿ ಪ್ರಬಲ ಭೂಕಂಪ: ಮೂವರ ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ

ಪಶ್ಚಿಮ ಜಪಾನ್ ನ ಒಸಾಕಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪನದಲ್ಲಿ 6.1 ತೀವ್ರತೆ ದಾಖಲಾಗಿದೆ. ಭೂಕಂಪದಿಂದ ಭಾರೀ ಪ್ರಮಾಣದಲ್ಲಿ ಹಾನಿಯುಂಟಾಗಿದೆ. ಮೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

ಸ್ಥಳೀಯ ಪತ್ರಿಕೆ ದಿ ಜಪಾನ್ ಟೈಮ್ಸ್ ವರದಿ ಪ್ರಕಾರ, ಈವರೆಗೆ ಮೂವರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರಂತೆ. ಮೂರು ವರ್ಷದ ಮಗು ಸೇರಿದಂತೆ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆಂದು ಮೂಲಗಳು ಹೇಳಿವೆ.

ಜಪಾನ್ ಹವಾಮಾನ ಇಲಾಖೆ ಪ್ರಕಾರ ಬೆಳಿಗ್ಗೆ 7.58ಕ್ಕೆ ಭೂಕಂಪ ಸಂಭವಿಸಿದೆಯಂತೆ. ಸುನಾಮಿ ಬಗ್ಗೆ ಯಾವುದೇ ಎಚ್ಚರಿಕೆ ಸಂದೇಶ ಜಾರಿಯಾಗಿಲ್ಲ. ಕಳೆದ ಕೆಲ ವರ್ಷಗಳ ನಂತ್ರ ಸಂಭವಿಸಿದ ಪ್ರಬಲ ಹಾಗೂ ಅಪಾಯಕಾರಿ ಭೂಕಂಪ ಇದು ಎನ್ನಲಾಗಿದೆ.

ಒಸಾಕಾ ಸೇರಿದಂತೆ ಸುತ್ತಮುತ್ತ ಪ್ರದೇಶದಲ್ಲಿ ಬುಲೆಟ್ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಭೂಕಂಪದಲ್ಲಿ ಕೆಲ ಮನೆಗಳು ನೆಲಕ್ಕುರುಳಿವೆ. 170,000 ಮನೆಗಳಿಗೆ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...