alex Certify
ಕನ್ನಡ ದುನಿಯಾ       Mobile App
       

Kannada Duniya

ಮಳೆಯ ರುದ್ರನರ್ತನಕ್ಕೆ ತತ್ತರಿಸಿದೆ ಜಪಾನ್

ಜಪಾನ್​​ ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನರಲ್ಲಿ ಆತಂಕ ಸೃಷ್ಠಿಸಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ದೇಶದ ಹಲವು ನಗರಗಳ ಜನರ ನಿದ್ದೆಗೆಡಿಸಿದೆ. ವರುಣನ ಅಟ್ಟಹಾಸಕ್ಕೆ ಜಪಾನ್​ ನಲುಗಿದೆ.

ಸೋಮವಾರು ಮಳೆಯ ರುದ್ರನರ್ತನ ಮುಂದುವರೆದಿದ್ದು, 100 ಕ್ಕೂ ಹೆಚ್ಚು ಜನರ ಪ್ರಾಣವನ್ನು ಬಲಿ ಪಡೆದಿದೆ. ಅಲ್ಲದೆ ಹಲವು ಜನ ನಾಪತ್ತೆಯಾಗಿದ್ದಾರೆ.

ಸೋಮವಾರ ಬೆಳಿಗ್ಗೆಯಿಂದ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಅಪಾರ್ಟ್​​ಮೆಂಟ್​, ದೊಡ್ಡ ದೊಡ್ಡ ಬಿಲ್ಡಿಂಗ್​​ಗಳ ಮೇಲೆ ಕುಳಿತ ಜನರನ್ನು ರಕ್ಷಣಾ ಸಿಬ್ಬಂದಿ ರಕ್ಷಿಸುವಲ್ಲಿ ಹರಸಾಹಸ ಪಡ್ತಾ ಇದ್ದಾರೆ.

ಇನ್ನು ಪರಿಸ್ಥಿತಿ ದಿನೇ ದಿನೇ ಬಿಗಡಾಯಿಸುತ್ತಿದೆ. ಈ ನಿಟ್ಟಿನಲ್ಲಿ ರಕ್ಷಣಾ ಸಿಬ್ಬಂದಿ ತಮ್ಮ ಶಕ್ತಿ ಮೀರಿ ಕೆಲಸ ಮಾಡ್ತಾ ಇದ್ದಾರೆ. ನಿರಾಶ್ರಿತರಿಗೆ ಸೂಕ್ತ ಸೌಲಭ್ಯ ಒದಗಿಸಲು ಸರ್ಕಾರ ಹಗಲು ಇರುಳು ಎನ್ನದೆ ಶ್ರಮಿಸುತ್ತಿದೆ. ಭಾರೀ ಮಳೆಯ ಪರಿಣಾಮ ಹಿರೋಶಿಮಾ ಪ್ರಾಂತ್ಯದಲ್ಲಿ ಭಾರೀ ನಷ್ಟವಾಗಿದೆ.

ಗುರುವಾರದಿಂದ ಜಪಾನ್​​ನ ಪಶ್ಚಿಮ ವಲಯದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅಂದಾಜಿನ ಪ್ರಕಾರ ಜುಲೈನಲ್ಲಿ ಸುರಿಯಬೇಕಿದ್ದ ಮಳೆಯ ಪ್ರಮಾಣವನ್ನು ಮೀರಿ, ಮಳೆ ಸುರಿಯುತ್ತಿದ್ದು, ಆತಂಕ ಸೃಷ್ಠಿಸಿದೆ. ಇನ್ನು ನಿರಾಶ್ರಿತ ಕೇಂದ್ರಗಳನ್ನು ತೆರೆಯಲಾಗಿದ್ದು, ಜನರು ಆತಂಕಗೊಳ್ಳುವ ಅವಶ್ಯಕತೆ ಇಲ್ಲ ಎಂದು ಸರ್ಕಾರ ತಿಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...