alex Certify
ಕನ್ನಡ ದುನಿಯಾ       Mobile App
       

Kannada Duniya

ಉಗ್ರರನ್ನು ಹೊಡೆದುರುಳಿಸಿದ ರಕ್ಷಣಾ ಪಡೆ

Security forces shoot dead university attackers

ಕಾಬೂಲ್: ಆಫ್ಘಾನಿಸ್ತಾನದ ಪಶ್ಚಿಮ ಪ್ರಾಂತ್ಯದಲ್ಲಿ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದು, ಗುಂಡಿನ ದಾಳಿ ನಡೆಸಿದ್ದಾರೆ. ಕಾಬೂಲ್ ನಲ್ಲಿರುವ ಅಮೆರಿಕನ್ ವಿಶ್ವವಿದ್ಯಾಲಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ಈ ವೇಳೆ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದು, ದಾಳಿ ಮಾಡಿದ್ದ ಇಬ್ಬರು ಉಗ್ರರನ್ನು ಈಗ ಹೊಡೆದುರುಳಿಸಲಾಗಿದೆ.

ಅಮೆರಿಕನ್ ವಿಶ್ವವಿದ್ಯಾಲಯದ ಸೆಕ್ಯೂರಿಟಿ ಗಾರ್ಡ್ ಹತ್ಯೆ ಮಾಡಿದ್ದ ಉಗ್ರರು, ಏಕಾಏಕಿ ಗುಂಡು ಹಾರಿಸುತ್ತಾ, ಕ್ಯಾಂಪಸ್ ಒಳಗೆ ನುಗ್ಗಿದ್ದರು. 21 ವಿದ್ಯಾರ್ಥಿಗಳನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದಲ್ಲದೇ ಕಟ್ಟಡಗಳನ್ನು ಸ್ಪೋಟಿಸಿದ್ದರು.

ತೀವ್ರ ಕಾರ್ಯಾಚರಣೆ ನಡೆಸಿದ್ದ ರಕ್ಷಣಾ ಪಡೆ ಇದೀಗ ದಾಳಿ ನಡೆಸಿದ್ದ ಇಬ್ಬರು ಶಸ್ತ್ರಸಜ್ಜಿತ ಉಗ್ರರನ್ನು ಹತ್ಯೆ ಮಾಡಿದ್ದು, ಒತ್ತೆಯಾಳಾಗಿದ್ದವರನ್ನು ಸುರಕ್ಷಿತವಾಗಿ ಬಿಡುಗಡೆಗೊಳಿಸಲಾಗಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...