alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಬಲ ಭೂಕಂಪಕ್ಕೆ ನೂರಾರು ಮಂದಿ ಬಲಿ

ಬಾಗ್ದಾದ್: ಇರಾಕ್ ನ ಕುರ್ದಿಸ್ತಾನದ ಸುಲೈಮಿಯಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪವಾಗಿದ್ದು, ಸುಮಾರು 100 ಮಂದಿ ಸಾವನ್ನಪ್ಪಿದ್ದು, ಅದಕ್ಕಿಂತ ಹೆಚ್ಚಿನ ಜನ ಗಾಯಗೊಂಡಿದ್ದಾರೆ.

ಇರಾಕ್ ನಗರ ಹಲಾಬ್ಜಾದ್ ನೈಋತ್ಯ ದಿಕ್ಕಿನಲ್ಲಿ 20 ಮೈಲುಗಳಷ್ಟು ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ಕಂಡು ಬಂದಿದ್ದು, ರಿಕ್ಟರ್ ಮಾಪಕದಲ್ಲಿ 7.3 ತೀವ್ರತೆಯ ಕಂಪನ ದಾಖಲಾಗಿದೆ. ಕಂಪನದ ಅನುಭವವಾಗುತ್ತಿದ್ದಂತೆ ಕಟ್ಟಡಗಳಲ್ಲಿದ್ದ ಜನ ಆತಂಕದಿಂದ ಹೊರಗೆ ಓಡಿ ಬಂದಿದ್ದಾರೆ.

ಇರಾಕ್, ಇರಾನ್ ಗಡಿ ಪ್ರದೇಶ ಸೇರಿ ಹಲವು ಕಡೆಗಳಲ್ಲಿ ಭಾರೀ ಕಂಪನವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಭೂಕಂಪದಿಂದ ಹಾನಿಗೀಡಾದ ಪ್ರದೇಶಗಳಿಗೆ ರಕ್ಷಣಾ ತಂಡಗಳು ಧಾವಿಸಿ ಕಾರ್ಯಾಚರಣೆ ಆರಂಭಿಸಿವೆ. ವೈದ್ಯರ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...