alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ಯಾರಿಸ್ ಏರ್ಪೋರ್ಟ್ ನಲ್ಲಿ ಶೂಟೌಟ್

french-police-reuters_650x400_41447670787-1

ಪ್ಯಾರಿಸ್ ನ ಒರ್ಲಿ ವಿಮಾನ ನಿಲ್ದಾಣದಲ್ಲಿ ಫ್ರಾನ್ಸ್ ಸೈನಿಕರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಆತ ಯೋಧರ ಕೈಯಲ್ಲಿದ್ದ ಶಸ್ತ್ರಾಸ್ತ್ರವನ್ನು ಕಸಿದುಕೊಳ್ಳಲು ಯತ್ನಿಸಿದ್ದರಿಂದ ಹತ್ಯೆ ಮಾಡಲಾಗಿದೆ ಅಂತಾ ಹೇಳಲಾಗ್ತಿದೆ. ಶೂಟೌಟ್ ಹಿನ್ನೆಲೆಯಲ್ಲಿ ಒರ್ಲಿ ವಿಮಾನ ನಿಲ್ದಾಣದಲ್ಲಿದ್ದ ಪ್ರಯಾಣಿಕರನ್ನೆಲ್ಲ ತೆರವು ಮಾಡಲಾಯ್ತು.

ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಸಂಭಾವ್ಯ ದಾಳಿಯನ್ನು ತಡೆಯಲು ಸೈನಿಕರು ಫುಲ್ ಅಲರ್ಟ್ ಆಗಿದ್ದಾರೆ. ಏರ್ಪೋರ್ಟ್ ನಾದ್ಯಂತ ಶೋಧ ಕಾರ್ಯ ನಡೆಸಲಾಗಿದೆ. ಏರ್ಪೋರ್ಟ್ ಸುತ್ತಮುತ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಭದ್ರತೆಯನ್ನು ಹೆಚ್ಚಿಸಲಾಗಿದೆ.

ವಿಮಾನ ನಿಲ್ದಾಣದ ಸಮೀಪ ನಾಗರೀಕರು ಸಂಚರಿಸದಂತೆ ಫ್ರಾನ್ಸ್ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಹತ್ಯೆಯಾದ ವ್ಯಕ್ತಿ ಯಾರು ಅನ್ನೋದು ಇನ್ನೂ ತಿಳಿದು ಬಂದಿಲ್ಲ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...