alex Certify
ಕನ್ನಡ ದುನಿಯಾ       Mobile App
       

Kannada Duniya

ಮೆಕ್ಸಿಕೋದ ಮನೆಯೊಂದರಲ್ಲಿ ಸಿಕ್ತು 11 ಶವ

ದೆಹಲಿಯ ಬುರಾರಿಯ ಆತ್ಮಹತ್ಯೆ ಪ್ರಕರಣವನ್ನು ನೆನಪು ಮಾಡುವ ಘಟನೆಯೊಂದು ಮೆಕ್ಸಿಕೋದಲ್ಲಿ ನಡೆದಿದೆ. ಉತ್ತರ ಚಿಹುವಾಹುವಾದ ಸಿಯುಡಾಡ್ ಜುಆರೆಜ್ ನ ಮನೆಯೊಂದರಲ್ಲಿ 11 ಜನರ ಶವ ಸಿಕ್ಕಿದೆ. ಮನೆಯಲ್ಲಿಯೇ ಒತ್ತೆಯಾಳಾಗಿಟ್ಟುಕೊಂಡು ಅವ್ರಿಗೆ ಹಿಂಸೆ ನೀಡಲಾಗುತ್ತಿತ್ತು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮೃತರಲ್ಲಿ ಮೂವರು ಮಹಿಳೆಯರು ಹಾಗೂ ಎಂಟು ಪುರುಷರು ಸೇರಿದ್ದಾರೆ. ಮೃತರಿಗೆ ಡ್ರಗ್ಸ್ ನೀಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡು ಹಾರಿಸಿ 11 ಮಂದಿಯನ್ನು ಕೊಲೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಎಲ್ಲ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮನೆಯಲ್ಲಿ ಯಾವುದೇ ದುಃಖದ ಘಟನೆ ನಡೆದಿರಲಿಲ್ಲ. ಆಗಾಗ ಮನೆಯಲ್ಲಿ ಪಾರ್ಟಿ ನಡೆಯುತ್ತಿತ್ತು. ಅನೇಕರು ಬರುತ್ತಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...