alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ಅಮ್ಮನ ಸಾವು, ಕಂದಮ್ಮನ ಜನನ

us 123mn

ಅಪಘಾತದಲ್ಲಿ ಮೃತಪಟ್ಟ ಗರ್ಭಿಣಿಯ ಹೊಟ್ಟೆಯಲ್ಲಿದ್ದ, ಜೀವಂತ ಮಗುವನ್ನು ರಕ್ಷಿಸುವಲ್ಲಿ ವೈದ್ಯರು ಯಶಸ್ವಿಯಾದ ಘಟನೆ ಅಮೆರಿಕದಲ್ಲಿ ನಡೆದಿದೆ. ಮಿಸೌರಿ ರಾಜ್ಯದ ಕೇನ್ ಗಿರಾರ್ಡು ಸಮೀಪದ ಪೋಪರ್ ಬ್ಲಫ್ ಎಂಬಲ್ಲಿ ಈ ಘಟನೆ ನಡೆದಿದೆ.

ಮ್ಯಾಥ್ಯೂ ರೈಡರ್ ಎಂಬಾತನ ಪತ್ನಿ ಸಾರಾ ಇಲೆರ್ ತುಂಬು ಗರ್ಭಿಣಿಯಾಗಿದ್ದು, ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಮನೆಯಿಂದ ಕಾರಿನಲ್ಲಿ ಆಸ್ಪತ್ರೆಗೆ ಹೊರಟಿದ್ದಾರೆ. ಮಾರ್ಗಮಧ್ಯೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಕಾರ್ ಉರುಳಿ ಬಿದ್ದು ಸಾರಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮ್ಯಾಥ್ಯೂ ರೈಡರ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಅವರಿಬ್ಬರನ್ನು ಆಸ್ಪತ್ರೆಗೆ ಸೇರಿಸಿದ್ದು, ಮ್ಯಾಥ್ಯೂ ರೈಡರ್ ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ.

ಗರ್ಭಿಣಿಯಾಗಿದ್ದ ಮೃತ ಸಾರಾ ಇಲೆರ್ ಅವರಿಗೆ ತುರ್ತು ಚಿಕಿತ್ಸೆ ನೀಡಿ ಸಿಸೇರಿಯನ್ ಮೂಲಕ ಮಗುವನ್ನು ಹೊರತೆಗೆಯಲಾಗಿದೆ. 2 ಕೆಜಿ ತೂಕದ ಹೆಣ್ಣುಮಗು ಜನಿಸಿದ್ದು, ಅದರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಕ್ಕೆ ನೆರವಿನ ಮಹಾಪೂರವೇ ಹರಿದುಬಂದಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...