alex Certify
ಕನ್ನಡ ದುನಿಯಾ       Mobile App
       

Kannada Duniya

150 ಯೋಧರು ಸೇರಿ 300 ಮಂದಿ ಸಾವು

sudan

ದಕ್ಷಿಣ ಸೂಡಾನ್ ನಲ್ಲಿ ಹಿಂಸಾಚಾರ ಭುಗಿಲೆದ್ದು, 150 ಯೋಧರು ಸೇರಿದಂತೆ 300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸರ್ಕಾರದ ಸೇನಾ ಪಡೆಗಳು ಮತ್ತು ಬಂಡುಕೋರರ ನಡುವೆ ನಡೆಯುತ್ತಿರುವ ಸಂಘರ್ಷ ಮುಂದುವರೆದಿದೆ.

ಪರಿಸ್ಥಿತಿ ನಿಯಂತ್ರಣಕ್ಕೆ ಸರ್ಕಾರ ಈಗಾಗಲೇ ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದು, ವಿಶ್ವಸಂಸ್ಥೆ ಕೂಡ ಕ್ರಮಕ್ಕೆ ಸೂಚನೆ ನೀಡಿದೆ. ಸರ್ಕಾರದ ಸೇನೆ ಮತ್ತು ಬಂಡುಕೋರರ ನಡುವಿನ ಘರ್ಷಣೆ ಹಿಂಸಾಚಾರಕ್ಕೆ ತಿರುಗಿ ಹಲವು ನಾಗರಿಕರು ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಸೂಡಾನ್ ನಲ್ಲಿ ಭಾರತೀಯರು ಕೂಡ ನೆಲೆಸಿದ್ದು, ಅವರ ಸುರಕ್ಷತೆಗೆ ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಸೂಚನೆ ನೀಡಿದ್ದಾರೆ. ರಾಯಭಾರ ಕಚೇರಿಯಿಂದ ಭಾರತೀಯರ ಸುರಕ್ಷತೆಗೆ ಕ್ರಮ ಕೈಗೊಳ್ಳಲಾಗಿದೆ.

ಅಲ್ಲಿ ನೆಲೆಸಿರುವ ಭಾರತೀಯರನ್ನು ವಾಪಸ್ ಕರೆಸಿಕೊಳ್ಳುವ ಬಗ್ಗೆ ಯೋಜಿಸಲಾಗಿದೆ. ಅಲ್ಲದೇ, ಯಾರೂ ಸೂಡಾನ್ ಗೆ ಪ್ರಯಾಣಿಸಬಾರದೆಂದು ಸಲಹೆ ನೀಡಲಾಗಿದೆ. ದಕ್ಷಿಣ ಸೂಡಾನ್ ನಲ್ಲಿ ನಡೆಯುತ್ತಿರುವ ಸಂಘರ್ಷಕ್ಕೆ ಅನೇಕ ರಾಷ್ಟ್ರಗಳು ಪ್ರತಿಕ್ರಿಯೆ ನೀಡಿದ್ದು, ಶಾಂತಿ ನೆಲೆಸಲು ಸಹಕಾರ ನೀಡಬೇಕೆಂದು ಹೇಳಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...