alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿಯನ್ನು ಬೆನ್ನ ಮೇಲೆ ಹೊತ್ತೊಯ್ದ ಮಾಜಿ ಪ್ರಧಾನಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಫೋಟೋ ಒಂದು ಫುಲ್ ವೈರಲ್ ಆಗಿದೆ. ಮಾಜಿ ಪ್ರಧಾನಿಯೊಬ್ಬರು ತಮ್ಮ ಪತ್ನಿಯನ್ನು ಬೆನ್ನ ಮೇಲೆ ಹೊತ್ತೊಯ್ದಿದ್ದು, ಇದನ್ನು ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ ಬಳಿಕ ಸಹಸ್ರಾರು ಸಂಖ್ಯೆಯಲ್ಲಿ ಜನ ಲೈಕ್ ಮಾಡಿದ್ದಾರೆ.

ಭೂತಾನ್ ಮಾಜಿ ಪ್ರಧಾನಿ ಶೆರಿಂಗ್ ತೊಗ್ಬೆ ತಮ್ಮ ಪತ್ನಿ ತಾಶಿ ದೋಮಾರನ್ನು ಕೆಸರಿನಿಂದ ಕೂಡಿದ ರಸ್ತೆಯಲ್ಲಿ ಹೆಗಲ ಮೇಲೆ ಹೊತ್ತುಕೊಂಡು ದಾಟಿಸಿದ್ದು, ಪತಿ-ಪತ್ನಿಯ ಈ ಅಪೂರ್ವ ಫೋಟೋ ಜನಮೆಚ್ಚುಗೆಗೆ ಪಾತ್ರವಾಗಿದೆ.

ಟ್ವಿಟ್ಟರ್ ನಲ್ಲಿ ಈ ಫೋಟೋವನ್ನು ಪೋಸ್ಟ್ ಮಾಡಿದ ಶೆರಿಂಗ್ ತೊಗ್ಬೆ, ಪತ್ನಿಯ ಕೋಮಲ ಪಾದಗಳನ್ನು ಸ್ವಚ್ಛವಾಗಿರಿಸಲು ಪುರುಷರು ಹೀಗೆ ಮಾಡಲೇಬೇಕು ಎಂದು ಬರೆದುಕೊಂಡಿದ್ದಾರೆ. ಈ ಜೋಡಿಯ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...