alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ರಿಟನ್ ಸರ್ಕಾರದಲ್ಲಿ ನಾರಾಯಣ ಮೂರ್ತಿ ಅಳಿಯನಿಗೆ ಉನ್ನತ ಹುದ್ದೆ

ಬ್ರಿಟನ್ ಪ್ರಧಾನಿ ಥೆರೆಸಾ ಮೇ ತಮ್ಮ ಸಚಿವರುಗಳು ಮತ್ತು ಕಾರ್ಯದರ್ಶಿಗಳ ತಂಡವನ್ನು ಪುನಾರಚನೆ ಮಾಡಿದ್ದಾರೆ. ವಿಶೇಷ ಅಂದ್ರೆ ಇನ್ಫೋಸಿಸ್ ನ ಸಹ ಸಂಸ್ಥಾಪಕರಾದ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್ ಅವರಿಗೆ ಈಗ ಬ್ರಿಟನ್ ಸರ್ಕಾರದಲ್ಲಿ ಉನ್ನತ ಹುದ್ದೆ ಲಭಿಸಿದೆ.

ಬ್ರಿಟನ್ ನ ಮಿನಿಸ್ಟ್ರಿ ಆಫ್ ಹೌಸಿಂಗ್, ಕಮ್ಯೂನಿಟಿಸ್ & ಲೋಕಲ್ ಗವರ್ನಮೆಂಟ್ ಸೆಕ್ರೆಟರಿಯಾಗಿ ಅವರನ್ನು ಥೆರೆಸಾ ಮೇ ನೇಮಕ ಮಾಡಿದ್ದಾರೆ. ಈ ಬಗ್ಗೆ ಬ್ರಿಟನ್ ಪ್ರಧಾನಿ ಕಾರ್ಯಾಲಯ ಟ್ವೀಟ್ ಕೂಡ ಮಾಡಿದೆ.

2015ರ ಚುನಾವಣೆಯಲ್ಲಿ ರಿಷಿ ಸುನಕ್ ಅವರು ನಾರ್ತ್ ಯಾರ್ಕ್ ಶೈರ್ ನ ರಿಚ್ಮಂಡ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಆಕ್ಸ್ ಫರ್ಡ್ ಯೂನಿವರ್ಸಿಟಿಯಲ್ಲಿ ಪದವಿ ಪಡೆದಿರುವ ರಿಷಿ, 2014ರಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...