alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೊಂದು ವಿಮಾನ ದುರಂತ: 23 ಸಾವು

RTX28APN

ಬುಧವಾರ ಬೆಳಿಗ್ಗೆ ನಾಪತ್ತೆಯಾಗಿದ್ದ 23 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ನೇಪಾಳದ ಲಘು ವಿಮಾನದ ಅವಶೇಷ ಇಲ್ಲಿನ ಮ್ಯಾಗ್ಡಿ ಜಿಲ್ಲೆಯ ಧಾನಾ ಗ್ರಾಮದ ಬಳಿ ಪತ್ತೆಯಾಗಿದ್ದು, ಆ ಮೂಲಕ ಪ್ರಯಾಣಿಕರೆಲ್ಲರೂ ಸಾವನ್ನಪ್ಪಿರುವುದು ಬಹುತೇಕ ಖಚಿತವಾದಂತಾಗಿದೆ.

ತಾರಾ ಏರ್ ಲೈನ್ಸ್ ಗೆ ಸೇರಿದ ವಿಮಾನ ಕಠ್ಮಂಡುವಿನಿಂದ ಸುಮಾರು 250 ಕಿ.ಮೀ. ದೂರದಲ್ಲಿರುವ ಗುಡ್ಡಗಾಡು ನಗರ ಪೋಖರಾದಿಂದ ಜೋಮ್ ಸಮ್ ಗೆ ತೆರಳುತ್ತಿತ್ತು ಎನ್ನಲಾಗಿದ್ದು, ವಿಮಾನದಲ್ಲಿ ಇಬ್ಬರು ವಿದೇಶಿ ಪ್ರಯಾಣಿಕರು ಸೇರಿದಂತೆ 21 ಮಂದಿ ಪ್ರಯಾಣಿಸುತ್ತಿದ್ದರು. ಪೋಖರಾ ವಿಮಾನ ನಿಲ್ದಾಣದಿಂದ ಟೇಕಾಫ್ ಆದ 18 ನಿಮಿಷಗಳಲ್ಲಿ ಸಂಪರ್ಕ ಕಳೆದುಕೊಂಡಿದ್ದ ವಿಮಾನದ ಪತ್ತೆಗೆ ಅಧಿಕಾರಿಗಳು ಮುಂದಾಗಿದ್ದರು.

ಅಲ್ಲದೇ ಈ ನಡುವೆ ಜೋಮ್ ಸಮ್ ನ ಸ್ಥಳೀಯ ನಿವಾಸಿಗಳ ಪ್ರಕಾರ ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು, ಪರ್ವತಕ್ಕೆ ಡಿಕ್ಕಿ ಹೊಡೆದು ವಿಮಾನ ಪತನವಾಗಿರುವ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಇದೀಗ ಮ್ಯಾಗ್ಡಿ ಜಿಲ್ಲೆಯ ಧಾನಾ ಗ್ರಾಮದ ಬಳಿ ವಿಮಾನದ ಅವಶೇಷ ಪತ್ತೆಯಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...