alex Certify
ಕನ್ನಡ ದುನಿಯಾ       Mobile App
       

Kannada Duniya

ಅಮೆರಿಕಾದಲ್ಲಿ ಹೆಚ್ಚಿದ್ದಾರೆ ಈ ದೇಶದ ವಿದ್ಯಾರ್ಥಿಗಳು

ಅಮೆರಿಕಾದ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಸುಮಾರು 2,11,703  ಭಾರತೀಯ ವಿದ್ಯಾರ್ಥಿಗಳು ಅಧ್ಯಯನ ಮಾಡ್ತಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ವರದಿಯಲ್ಲಿ ಈ ಸಂಗತಿ ಬಹಿರಂಗವಾಗಿದೆ. ಅಮೆರಿಕಾದಲ್ಲಿ ಅಧ್ಯಯನ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ.

ಅಮೆರಿಕಾದಲ್ಲಿ ಅಧ್ಯಯನ ಮಾಡ್ತಿರುವ ವಿದೇಶಿ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದೆ. ಚೀನಾದ 3,77,070  ವಿದ್ಯಾರ್ಥಿಗಳು ಅಮೆರಿಕಾದಲ್ಲಿ ಅಧ್ಯಯನ ಮಾಡ್ತಿದ್ದಾರೆ. ಭಾರತ ಹಾಗೂ ಚೀನಾದಿಂದ ಅಮೆರಿಕಾಕ್ಕೆ ಬರುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಪ್ರತಿ ವರ್ಷ ಹೆಚ್ಚಾಗ್ತಿದೆ.

ಎಎಸ್ಇಇಯ ಸೆವಿಸ್ ವರದಿ ಪ್ರಕಾರ, ಅಮೆರಿಕಾಕ್ಕೆ ಬರುವ ವಿದೇಶಿ ವಿದ್ಯಾರ್ಥಿಗಳಲ್ಲಿ ಶೇಕಡಾ 77 ರಷ್ಟು ವಿದ್ಯಾರ್ಥಿಗಳು ಏಷ್ಯಾದಿಂದ ಬರ್ತಾರಂತೆ. ಏಷ್ಯಾದಿಂದ ಅಮೆರಿಕಾಕ್ಕೆ ಅಧ್ಯಯನಕ್ಕೆ ಬರ್ತಿರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ನಿಧಾನಗತಿಯ ಏರಿಕೆ ಕಾಣುತ್ತಿದ್ದರೂ ಹಿಂದಿನ ವರ್ಷಗಳಿಗೆ ಹೋಲಿಸಿದ್ರೆ ಅಮೆರಿಕಾಕ್ಕೆ ಬರ್ತಿರುವ ಏಷ್ಯಾ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆಯಂತೆ.

ಪಾಕಿಸ್ತಾನ, ಬರ್ಮಾ ಹಾಗೂ ಕಾಂಬೋಡಿಯಾದಿಂದ ಬರ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ. ಆದ್ರೆ ಸೌದಿ ಅರೇಬಿಯಾ, ದಕ್ಷಿಣ ಕೊರಿಯಾ ಮತ್ತು ಯಮನ್ ನಿಂದ ಬರ್ತಿರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...