alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕಿಸ್ತಾನದಲ್ಲಿ ‘ಪದ್ಮಾವತ್’ ಬಿಡುಗಡೆಗಿಲ್ಲ ವಿಘ್ನ…!

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತ್’ ಚಿತ್ರದ ವಿರುದ್ಧ ಭಾರತದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಆದ್ರೆ ನೆರೆಯ ಪಾಕಿಸ್ತಾನದಲ್ಲಿ ಸಿನೆಮಾ ರಿಲೀಸ್ ಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಪಾಕಿಸ್ತಾನದ ಸೆನ್ಸಾರ್ ಮಂಡಳಿ ಪದ್ಮಾವತ್ ಚಿತ್ರಕ್ಕೆ ಯು ಸರ್ಟಿಫಿಕೇಟ್ ನೀಡಿದೆ.

ಭಾರತದಲ್ಲಿ ಮೊದಲು ಪದ್ಮಾವತ್ ಚಿತ್ರಕ್ಕೆ U/A ಸರ್ಟಿಫಿಕೇಟ್ ನೀಡಲಾಗಿತ್ತು. ಚಿತ್ರ ನಿಷೇಧಿಸುವಂತೆ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ನಂತರ ಸೆನ್ಸಾರ್ ಮಂಡಳಿ ಒಂದಷ್ಟು ಬದಲಾವಣೆಗಳನ್ನು ಮಾಡುವಂತೆ ಸೂಚಿಸಿತ್ತು. ಅದರಂತೆ ಚಿತ್ರದ ಟೈಟಲ್ ಅನ್ನು ಕೂಡ ಪದ್ಮಾವತಿ ಬದಲು ಪದ್ಮಾವತ್ ಎಂದು ಬದಲಾಯಿಸಲಾಗಿತ್ತು.

ಆದ್ರೆ ಪಾಕಿಸ್ತಾನದಲ್ಲಿ ಪದ್ಮಾವತ್ ಚಿತ್ರಕ್ಕೆ ಯಾವುದೇ ವಿರೋಧ ವ್ಯಕ್ತವಾಗಿಲ್ಲ. ಕಲೆ, ಸೃಜನಶೀಲತೆ ಮತ್ತು ಮನರಂಜನೆಯುಳ್ಳ ಎಲ್ಲಾ ಚಿತ್ರಗಳನ್ನೂ ಪ್ರೋತ್ಸಾಹಿಸುವುದಾಗಿ ಪಾಕಿಸ್ತಾನದ ಸೆನ್ಸಾರ್ ಮಂಡಳಿ ಹೇಳಿದೆ. ಆದ್ರೆ ಪಾಕಿಸ್ತಾನವನ್ನು ಕೆಟ್ಟದಾಗಿ ಬಿಂಬಿಸಿದ್ದಾರೆ ಅನ್ನೋ ಆರೋಪದ ಮೇಲೆ ಸಲ್ಮಾನ್ ಖಾನ್ ಹಾಗೂ ಕತ್ರೀನಾ ಕೈಫ್ ಅಭಿನಯದ ‘ಟೈಗರ್ ಜಿಂದಾ ಹೈ’ ಚಿತ್ರವನ್ನು ಪಾಕಿಸ್ತಾನದಲ್ಲಿ ಬ್ಯಾನ್ ಮಾಡಲಾಗಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...