alex Certify
ಕನ್ನಡ ದುನಿಯಾ       Mobile App
       

Kannada Duniya

ಪತಿಯ ಗುಂಡೇಟಿಗೆ ಖ್ಯಾತ ನಟಿ ಬಲಿ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿ ಹಾರಿಸಿದ ಗುಂಡಿಗೆ ಖ್ಯಾತ ನಟಿ ಬಲಿಯಾಗಿರುವ ಘಟನೆ ಪಾಕಿಸ್ತಾನದ ಖೈಬರ್ ಫಕ್ತುಂಖ್ವಾ ಪ್ರಾಂತ್ಯದಲ್ಲಿ ನಡೆದಿದೆ.

ಗಾಯಕಿ ಹಾಗೂ ನಟಿಯಾಗಿರುವ ರೇಷ್ಮಾ ಹತ್ಯೆಯಾಗಿದ್ದು, ಈಕೆ ನೌಶೆರಾ ಕಲನ್ ಏರಿಯಾದಲ್ಲಿನ ತನ್ನ ಸಹೋದರನ ಮನೆಯಲ್ಲಿದ್ದ ವೇಳೆ ಅಲ್ಲಿಗೆ ಆಗಮಿಸಿದ ಪತಿ ಗುಂಡು ಹಾರಿಸಿದ್ದಾನೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ರೇಷ್ಮಾಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.

ರೇಷ್ಮಾ ಆರೋಪಿಯ ನಾಲ್ಕನೇ ಪತ್ನಿ ಎಂದು ಹೇಳಲಾಗಿದ್ದು ಕೌಟುಂಬಿಕ ಕಲಹವೇ ಈ ಹತ್ಯೆಗೆ ಕಾರಣವಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗುಂಡು ಹಾರಿಸಿದ ಬಳಿಕ ನಟಿ ರೇಷ್ಮಾ ಪತಿ ಸ್ಥಳದಿಂದ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...