alex Certify
ಕನ್ನಡ ದುನಿಯಾ       Mobile App
       

Kannada Duniya

ನೃತ್ಯ ಮಾಡಲೊಪ್ಪದ ನಟಿ ಗುಂಡೇಟಿಗೆ ಬಲಿ

ಕಾರ್ಯಕ್ರಮದಲ್ಲಿ ನೃತ್ಯ ಮಾಡಲು ನಿರಾಕರಿಸಿದಳೆಂಬ ಕಾರಣಕ್ಕೆ ರಂಗಭೂಮಿ ನಟಿಯನ್ನು ಗುಂಡಿಕ್ಕಿ ಕೊಂದ ಘಟನೆ ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿ ನಡೆದಿದೆ.

ನಟಿ ಸುಂಬೂಲ್ ಹತ್ಯೆಗೀಡಾಗಿದ್ದು, ಈಕೆಯನ್ನು ಖಾಸಗಿ ಕಾರ್ಯಕ್ರಮದಲ್ಲಿ ನೃತ್ಯ ಮಾಡಲು ಪೊಲೀಸ್ ಇಲಾಖೆಯ ಮಾಜಿ ನೌಕರ ನಹೀಂ ಎಂಬಾತ ಆಹ್ವಾನಿಸಿದ್ದನೆನ್ನಲಾಗಿದೆ. ಆದರೆ ಇದಕ್ಕೆ ಸುಂಬೂಲ್ ನಿರಾಕರಿಸಿದ್ದು, ಇದರಿಂದ ಸಿಟ್ಟಿಗೆದ್ದ ನಹೀಂ ಆತನ ಸಂಗಡಿಗನಾದ ಜಹಂಗೀರ್ ಎಂಬಾತನೊಂದಿಗೆ ಸುಂಬೂಲ್ ಮನೆಗೆ ತೆರಳಿ ಗುಂಡಿಕ್ಕಿದ್ದಾನೆ.

ತೀವ್ರವಾಗಿ ಗಾಯಗೊಂಡಿದ್ದ ಸುಂಬೂಲ್ ಳನ್ನು ಸಮೀಪದ ಮರ್ದಾನ್ ಮೆಡಿಕಲ್ ಕಾಂಪ್ಲೆಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಳೆನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದು, ಜಹಂಗೀರ್ ಎಂಬಾತ ಕೊಲೆ ಪ್ರಕರಣವೊಂದರಲ್ಲಿ ಈಗಾಗಲೇ ಜೀವಾವಧಿ ಶಿಕ್ಷೆಗೊಳಗಾಗಿದ್ದನೆನ್ನಲಾಗಿದೆ. ಜಾಮೀನಿನ ಮೇಲೆ ಹೊರ ಬಂದಿದ್ದ ಆತ ಈಗ ನಹೀಂ ಜೊತೆ ಸೇರಿ ಹತ್ಯೆ ಮಾಡಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...