alex Certify
ಕನ್ನಡ ದುನಿಯಾ       Mobile App
       

Kannada Duniya

ಮತದಾನದ ವೇಳೆ ಬಾಂಬ್ ಸ್ಫೋಟ: 15 ಸಾವು,12 ಮಂದಿಗೆ ಗಾಯ

ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗೆ ಮತದಾನ ನಡೆಯುತ್ತದೆ. ಮತದಾನದ ವೇಳೆ ಬಲುಚಿಸ್ತಾನದ ಕ್ವೆಟ್ಟಾದಲ್ಲಿ  ಬಾಂಬ್ ಸ್ಫೋಟಗೊಂಡ ಘಟನೆ ಬೆಳಕಿಗೆ ಬಂದಿದೆ. ಕ್ವೆಟ್ಟಾದಲ್ಲಿ ನಡೆದ ಬಾಂಬ್ ಬ್ಲಾಸ್ಟ್ ನಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ. 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬುಧವಾರ 11 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಮತದಾನ ಬೆಳಿಗ್ಗೆ 8 ಗಂಟೆಗೆ ಶುರುವಾಗಿದೆ. ಸಂಜೆ 6 ರವರೆಗೆ ಮತದಾನ ನಡೆಯಲಿದೆ. ಮತದಾನದ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಅನೇಕ ನಾಯಕರು ಈಗಾಗಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಾಂಬ್ ಸ್ಫೋಟಗೊಂಡ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಪಾಕಿಸ್ತಾನದಲ್ಲಿ 272 ಸ್ಥಾನಗಳಿಗೆ ಚುನಾವಣೆ ನಡೆಯುತ್ತದೆ. 3459 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. 10 ಕೋಟಿ 60 ಲಕ್ಷ ಮತದಾರರು ಮತ ಚಲಾವಣೆ ಮಾಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...