alex Certify
ಕನ್ನಡ ದುನಿಯಾ       Mobile App
       

Kannada Duniya

ಆ.11 ರಂದು ಪಾಕ್ ಪ್ರಧಾನಿಯಾಗಿ ಇಮ್ರಾನ್ ಪ್ರಮಾಣ

ಪಾಕಿಸ್ತಾನದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದಿದ್ದರೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್ ಪಕ್ಷ ಅತ್ಯಧಿಕ ಸ್ಥಾನ ಗಳಿಸಿದ್ದು, ಇತರೆ ಪಕ್ಷದ ಸದಸ್ಯರ ಸಹಾಯದಿಂದ ಪ್ರಧಾನಿಯಾಗಿ ಇಮ್ರಾನ್ ಖಾನ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ಇದಕ್ಕೆ ಪೂರಕವೆಂಬಂತೆ ಇಮ್ರಾನ್ ಖಾನ್ ಅವರು ಆಗಸ್ಟ್ 11 ರಂದು ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಇದಕ್ಕಾಗಿ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವುದಾಗಿ ಪಕ್ಷದ ನಾಯಕ ನಯೀನಲ್ ಹಕ್ ತಿಳಿಸಿದ್ದಾರೆ.

ಜುಲೈ  25ರಂದು ನಡೆದ ಚುನಾವಣೆಯಲ್ಲಿ ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್ ಹೆಚ್ಚು ಸ್ಥಾನಗಳಿಸಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಇಮ್ರಾನ್ ಖಾನ್ ರ ಪಕ್ಷ 115 ಸ್ಥಾನಗಳನ್ನು ಪಡೆದುಕೊಂಡಿದ್ದು, ಆದರೆ ಸರ್ಕಾರ ರಚಿಸಲು 137 ಸ್ಥಾನಗಳು ಬೇಕಿದೆ,

ಪಿಎಂಎಲ್-ಎನ್-64 ಮತ್ತು ಪಿಪಿಪಿ-43 ಸ್ಥಾನಗಳನ್ನು ಗಳಿಸಿವೆ. ಈಗಾಗಲೇ ಇಮ್ರಾನ್ ಖಾನ್ ಅವರು, ಪಿಎಂಎಲ್-ಎನ್ ಮತ್ತು ಪಿಪಿಪಿ ಪಕ್ಷಗಳ  ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿದ್ದಾರೆ.

ಮೂಲಗಳ ಪ್ರಕಾರ ಎಂಕ್ಯೂಎಂಎ-ಪಿ ಪಕ್ಷ 6, ಜಿಡಿಎ ಪಕ್ಷದ ಇಬ್ಬರು ಹಾಗೂ 13 ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಇಮ್ರಾನ್ ಖಾನ್ ಇವರ ಜೊತೆ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...