alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ವೆಬ್ ಸೈಟ್ ನಲ್ಲಿ ಭಾರತದ ರಾಷ್ಟ್ರಗೀತೆ ಪ್ರಸಾರ

614110-pak-website-1

ಪಾಕಿಸ್ತಾನಕ್ಕೆ ತೀವ್ರ ಮುಜುಗರ ತರುವಂತಹ ಘಟನೆಯೊಂದು ನಡೆದಿದೆ. ಪಾಕ್ ಸರ್ಕಾರದ ಅಧಿಕೃತ ವೆಬ್ ಸೈಟ್ ಹ್ಯಾಕ್ ಆಗಿದೆ. ಹ್ಯಾಕರ್ ಗಳು ಪಾಕಿಸ್ತಾನದ ವೆಬ್ ಸೈಟ್ ನಲ್ಲಿ ಭಾರತದ ರಾಷ್ಟ್ರಗೀತೆ ಮತ್ತು ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಪೋಸ್ಟ್ ಮಾಡಿದ್ದಾರೆ.

ಪಾಕ್ ಸರ್ಕಾರದ ಅಧಿಕೃತ ವೆಬ್ ಸೈಟ್ ಹ್ಯಾಕರ್ ಗಳ ಕೈವಶವಾಗಿತ್ತು. ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರಗೀತೆ ಪ್ರಸಾರ ಮಾಡಿದ್ದ ಹ್ಯಾಕರ್ ಗಳು, ಆಗಸ್ಟ್ 15ರ ಶುಭಾಶಯವನ್ನು ಪ್ರಕಟಿಸಿದ್ದರು. ಟ್ವಿಟ್ಟರ್ ಬಳಕೆದಾರನೊಬ್ಬ ಇದನ್ನು ಗಮನಿಸಿ, ಸ್ಕ್ರೀನ್ ಶಾಟ್ ಶೇರ್ ಮಾಡಿದ್ದಾನೆ.

ಮಧ್ಯಾಹ್ನ 2.45ರ ವೇಳೆಗೆ ವೆಬ್ ಸೈಟ್ ಅನ್ನು ಹ್ಯಾಕ್ ಮಾಡಲಾಗಿತ್ತು. ಈ ದಾಳಿಯಿಂದ ಪಾಕಿಸ್ತಾನದಲ್ಲಿ ಸೈಬರ್ ಭದ್ರತೆ ಇಲ್ಲ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ. 2 ತಿಂಗಳುಗಳ ಹಿಂದೆ ಭಾರತದ ಕುಲಭೂಷಣ್ ಯಾದವ್ ಗೆ ಮರಣದಂಡನೆ ಜಾರಿ ಮಾಡಿದ ಬೆನ್ನಲ್ಲೇ ಪಾಕಿಸ್ತಾನದ 30 ಅಧಿಕೃತ ವೆಬ್ ಸೈಟ್ ಗಳನ್ನು ಹ್ಯಾಕ್ ಮಾಡಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...