alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕಿಸ್ತಾನದಲ್ಲಿ ಭಯೋತ್ಪಾದನಾ ದಾಳಿಗೆ 5 ಬಲಿ

pakistan_wyzfmcq

ಭಯೋತ್ಪಾದಕರ ತವರು ಎಂದೇ ಕುಖ್ಯಾತಿ ಪಡೆದಿರುವ ಪಾಕಿಸ್ತಾನದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪಾಕಿಸ್ತಾನದ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಕಚೇರಿಯ ಮುಂಭಾಗದಲ್ಲಿಯೇ ಬಾಂಬ್ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಬಲೂಚಿಸ್ಥಾನ ವೈದ್ಯಕೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗ್ತಾ ಇದೆ. ಸ್ಫೋಟ ಎಷ್ಟು ತೀವ್ರವಾಗಿತ್ತು ಎಂದ್ರೆ ಕಚೇರಿ ಮುಂದೆ ನಿಂತಿದ್ದ ಕಾರುಗಳು ಛಿದ್ರಗೊಂಡಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆ ನಂತ್ರ ಭದ್ರತಾ ಸಿಬ್ಬಂದಿ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸುತ್ತಿದೆ. ಯಾವುದೇ ಸಂಘಟನೆ ಘಟನೆಯ ಹೊಣೆ ಹೊತ್ತುಕೊಂಡಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...