alex Certify
ಕನ್ನಡ ದುನಿಯಾ       Mobile App
       

Kannada Duniya

ಲೈವ್ ಕಾರ್ಯಕ್ರಮದಲ್ಲೇ ಪತ್ರಕರ್ತೆಗೆ ಕಪಾಳಮೋಕ್ಷ

pak-policeಸಾರ್ವಜನಿಕರ ಕುಂದು ಕೊರತೆಗಳನ್ನು ಲೈವ್ ಕಾರ್ಯಕ್ರಮದಲ್ಲಿ ವರದಿ ಮಾಡುತ್ತಿದ್ದ ಪತ್ರಕರ್ತೆಯೊಬ್ಬರಿಗೆ ಪೊಲೀಸ್ ಪೇದೆಯೊಬ್ಬ ಕಪಾಳಮೋಕ್ಷ ಮಾಡಿರುವುದಲ್ಲದೇ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.

K-21 ಚಾನೆಲ್ ವರದಿಗಾರ್ತಿ, ಕರಾಚಿಯ ನಾದ್ರಾ ಏರಿಯಾದ ಸಾರ್ವಜನಿಕರ ಕುಂದು ಕೊರತೆಗಳನ್ನು ಅವರಿಂದಲೇ ತಿಳಿದುಕೊಳ್ಳುವ ಮೂಲಕ ಲೈವ್ ಆಗಿ ವರದಿ ಮಾಡುತ್ತಿದ್ದರು. ಈ ವೇಳೆ ಅಲ್ಲಿಯೇ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬ ಚಾನೆಲ್ ನ ಕ್ಯಾಮರಾಮನ್ ಗೆ ಚಿತ್ರೀಕರಣ ಮಾಡದಂತೆ ತಾಕೀತು ಮಾಡಿ ಆತನನ್ನು ಪಕ್ಕಕ್ಕೆ ತಳ್ಳಿದ್ದಾನೆ.

ಆಗ ವರದಿಗಾರ್ತಿ ಆತನ ನಡೆಗೆ ಆಕ್ಷೇಪಿಸಿದ್ದು, ಈ ಸಂದರ್ಭದಲ್ಲಿ ಆಕೆಗೆ ಕಪಾಳಮೋಕ್ಷ ಮಾಡಿದ್ದಾನೆ. ಸಾರ್ವಜನಿಕರ ಸಮ್ಮುಖದಲ್ಲೇ ಈ ಘಟನೆ ನಡೆದಿದ್ದು, ಇಷ್ಟಕ್ಕೆ ಸುಮ್ಮನಾಗದ ಪೊಲೀಸ್ ಪೇದೆ, ತನ್ನ ಬಳಿಯಿದ್ದ ಗನ್ ನಿಂದ ಐದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ವಿಡಿಯೋ ಈಗ ವೈರಲ್ ಆಗಿದ್ದು, ಪೊಲೀಸ್ ಪೇದೆಯ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಹಿರಿಯ ಅಧಿಕಾರಿಗಳು, ಪೇದೆಯನ್ನು ಅಮಾನತು ಮಾಡಿದ್ದು, ತನಿಖೆಗೆ ಆದೇಶಿಸಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...