alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಟಿ ಬೀಸಿದ ಅಮೆರಿಕ: ಪಾಕಿಸ್ತಾನಕ್ಕೆ ಮತ್ತೆ ಮುಖಭಂಗ

ವಾಷಿಂಗ್ಟನ್ : ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸೈಯದ್ ನನ್ನು ಬಿಡುಗಡೆ ಮಾಡಿರುವ ಪಾಕಿಸ್ತಾನದ ಕ್ರಮಕ್ಕೆ ಅಮೆರಿಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಗೃಹ ಬಂಧನದಲ್ಲಿರುವ ಹಫೀಜ್ ಸೈಯದ್ ನನ್ನು ಬಿಡುಗಡೆ ಮಾಡುವಂತೆ ಪಾಕಿಸ್ತಾನದ ಲಾಹೋರ್ ನ್ಯಾಯಾಲಯ ಆದೇಶ ನೀಡಿದ್ದು, ಪಾಕಿಸ್ತಾನ ಸರ್ಕಾರ ಬಿಡುಗಡೆ ಮಾಡಿದೆ.

ಇದಕ್ಕೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಭಯೋತ್ಪಾದಕನೆಂದು ಘೋಷಿಸಿರುವ ಸೈಯದ್ ಹಫೀಜ್ ನನ್ನು ಬಿಡುಗಡೆ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಹೇಳಿತ್ತು.

ಅಮೆರಿಕ ಕೂಡ ಇದೇ ಮಾತನ್ನು ಪುರುಚ್ಚರಿಸಿದೆ. ಸೈಯದ್ ಹಫೀಜ್ ನನ್ನು ಬಿಡುಗಡೆ ಮಾಡದೇ ಆತನನ್ನು ಬಂಧನದಲ್ಲೇ ಇರಿಸುವಂತೆ ಪಾಕಿಸ್ತಾನಕ್ಕೆ ತಾಕೀತು ಮಾಡಿದೆ.

ಜಾಗತಿಕ ಭಯೋತ್ಪಾದಕನೆಂದು ಘೋಷಿಸಿರುವ ಹಫೀಜ್ ನನ್ನು ಬಿಡುಗಡೆ ಮಾಡಬಾರದು ಎಂದು ಅಮೆರಿಕ ರಾಜ್ಯ ಇಲಾಖೆಗಳ ವಕ್ತಾರ ಹೀದರ್ ನೌರ್ಟ್ ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...