alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಫ್ಯಾನ್ ಆಯ್ತು ಪಾಕ್: ದೂರವಾಣಿ ಕರೆ ನಂತ್ರ ಬದಲಾಯ್ತು ಮಾತಿನ ಧಾಟಿ

ಪಾಕಿಸ್ತಾನ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಇಮ್ರಾನ್ ಖಾನ್ ಗೆ ಕರೆ ಮಾಡಿ ಸಲ್ಲಿಸಿದ್ದ ಅಭಿನಂದನೆಯನ್ನು ಸ್ವೀಕರಿಸಿದೆ. ಉಭಯ ದೇಶಗಳ ನಡುವಿನ ಸಂಬಂಧದಲ್ಲಿ ಸುಧಾರಣೆ ತರುವ ಆಶಯ ವ್ಯಕ್ತಪಡಿಸಿದೆ.

ಪಾಕಿಸ್ತಾನದಲ್ಲಿ ನಡೆದ ಸಾರ್ವಜನಿಕ ಚುನಾವಣೆಯಲ್ಲಿ ಇಮ್ರಾನ್ ಖಾನ್ ನೇತೃತ್ವದ ಪಕ್ಷ ಪಿಟಿಐ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆಗಸ್ಟ್ 11 ರಂದು ಇಮ್ರಾನ್ ಖಾನ್, ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ, ದೂರವಾಣಿ ಕರೆ ಮಾಡಿ ಇಮ್ರಾನ್ ಖಾನ್ ಪಕ್ಷಕ್ಕೆ ಶುಭಕೋರಿದ್ದರು. ಭಾರತ-ಪಾಕಿಸ್ತಾನ ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಅಧ್ಯಯನ ಶುರುವಾಗಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದರು.

ಪಾಕಿಸ್ತಾನದ ಮುಂದಿನ ಪ್ರಧಾನಿ ಇಮ್ರಾನ್ ಖಾನ್, ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ. ವರ್ತಮಾನದಲ್ಲಿ ವಿವಾದದ ಬಗ್ಗೆ ಮಾತುಕತೆ ನಡೆಯಬೇಕು ಎಂದಿದ್ದಾರೆ. ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಡಾ. ಮೊಹಮ್ಮದ್ ಫೈಸಲ್, ಪತ್ರಿಕಾಗೋಷ್ಠಿ ನಡೆಸಿ, ಮೋದಿ ಕರೆಯ ಬಗ್ಗೆ ತಮ್ಮ ಅಭಿಪ್ರಾಯ ಹೇಳಿದ್ದಾರೆ. ಮೋದಿ ಕರೆಯಿಂದ ದ್ವಿಪಕ್ಷೀಯ ಸಂಬಂಧ ಸುಧಾರಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...