alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತೀಯ ಕಾರ್ಯಕ್ರಮಗಳಿಗೆ ನಿರ್ಬಂಧವಿಲ್ಲ ಎಂದ ಪಾಕ್ ಕೋರ್ಟ್

cinemd

ಲಾಹೋರ್: ಭಾರತದ ಕಾರ್ಯಕ್ರಮಗಳ ಪ್ರಸಾರಕ್ಕೆ ನಿರ್ಬಂಧ ಹೇರಬೇಕೆಂದು, ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ ಮಾಡಿದ್ದ ಮನವಿಗೆ ಕೋರ್ಟ್ ಸ್ಪಂದಿಸಿಲ್ಲ.

ಭಾರತದ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲು ಸರಿಯಾದ ಕಾರಣಗಳಿಲ್ಲ. ಸರ್ಕಾರವೂ ಆಕ್ಷೇಪ ವ್ಯಕ್ತಪಡಿಸಿಲ್ಲ. ಹೀಗಿರುವಾಗ ನಿರ್ಬಂಧ ಹೇರುವುದರಲ್ಲಿ ಅರ್ಥವೇ ಇಲ್ಲ ಎಂದು ಲಾಹೋರ್ ಹೈಕೋರ್ಟ್ ಹೇಳಿದೆ.

ಪ್ರಸ್ತುತ ಸಂದರ್ಭದಲ್ಲಿ ವಿಶ್ವವೇ ಒಂದು ಗ್ರಾಮದಂತಾಗಿದೆ. ಭಾರತದ ಕಾರ್ಯಕ್ರಮಗಳನ್ನು ನಿರ್ಬಂಧಿಸುವುದು ಸಾಧ್ಯವಿಲ್ಲ. ಅಗತ್ಯವಾದರೆ, ಪಾಕಿಸ್ತಾನ ವಿರುದ್ಧದ ಮತ್ತು ಆಕ್ಷೇಪಾರ್ಹ ಎನಿಸುವ ದೃಶ್ಯಗಳನ್ನು ನಿರ್ಬಂಧಿಸಬಹುದು ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಉರಿಯಲ್ಲಿ ನಡೆದ ಭಯೋತ್ಪಾದನಾ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ಸಂಬಂಧ ಹದಗೆಟ್ಟಿದ್ದು, ಭಾರತದ ಕಾರ್ಯಕ್ರಮಗಳ ಪ್ರಸಾರ ತಡೆಗೆ ಪಾಕ್ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ ಮನವಿ ಮಾಡಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...