alex Certify
ಕನ್ನಡ ದುನಿಯಾ       Mobile App
       

Kannada Duniya

ಇಮ್ರಾನ್ ಪದಗ್ರಹಣಕ್ಕೆ ಸಮಾರಂಭಕ್ಕೆ ಮಾಜಿ ಕ್ರಿಕೆಟಿಗರಿಗೆ ಆಹ್ವಾನ

ಪಾಕಿಸ್ತಾನ ಮಾಜಿ ಕ್ರಿಕೆಟ್ ಆಟಗಾರ, ಹಾಲಿ ರಾಜಕಾರಣಿ ಇಮ್ರಾನ್ ಖಾನ್ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಆಗಸ್ಟ್ 11 ರಂದು ಇಮ್ರಾನ್, ಪಾಕ್ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಹಾಗೂ ಕ್ರಿಕೆಟ್ ಆಟಗಾರರಿಗೆ ಆಹ್ವಾನ ನೀಡಲಾಗಿದೆ.

ಪಾಕಿಸ್ತಾನ ಚುನಾವಣೆಯಲ್ಲಿ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷ 116 ಸ್ಥಾನದಲ್ಲಿ ಜಯದ ನಗೆ ಬೀರಿದೆ. ಮ್ಯಾಜಿಕ್ ನಂಬರ್ ಗೆ ಇನ್ನೂ 22 ಸ್ಥಾನದ ಕೊರತೆ ಇದ್ದು, ಪಕ್ಷೇತರರು ಬೆಂಬಲ ನೀಡಿದ್ದಾರೆ.

ಭಾರತದ ಮಾಜಿ ಕ್ರಿಕೆಟ್ ಆಟಗಾರರಾದ ಸುನಿಲ್ ಗಾವಸ್ಕರ್, ಕಪಿಲ್ ದೇವ್ ಮತ್ತು ನವಜೋತ್ ಸಿಂಗ್ ಸಿದ್ದು ಅವರನ್ನು ಪದಗ್ರಹಣ ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ಸ್ಟಾರ್ ಆಟಗಾರರನ್ನು ಹೊರತುಪಡಿಸಿ ಬಾಲಿವುಡ್‌ ನ ಖ್ಯಾತ ನಟ ಅಮೀರ್ ಖಾನ್ ಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ ಎಂದು ತಿಳಿದು ಬಂದಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಒಳಗೊಂಡಂತೆ ವಿವಿಧ ದೇಶಗಳ ನಾಯಕರನ್ನು ಕೂಡ ಸಮಾರಂಭಕ್ಕೆ ಆಹ್ವಾನಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...