alex Certify
ಕನ್ನಡ ದುನಿಯಾ       Mobile App
       

Kannada Duniya

ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಪ್ರಯಾಣಿಕರು

daalo

ಪ್ರಯಾಣದ ಸಂದರ್ಭದಲ್ಲಿ ಎಷ್ಟೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೂ, ಕಡಿಮೆಯೇ. ಕೆಲವೊಮ್ಮೆ ಆಕಸ್ಮಿಕವಾಗಿ ಅನಾಹುತ ಸಂಭವಿಸಿ ಬಿಡುತ್ತವೆ. ಅದರಲ್ಲಿಯೂ ವಿಮಾನದಲ್ಲಿ ಪ್ರಯಾಣಿಸುವಾಗ ಮೈಯೆಲ್ಲಾ ಕಣ್ಣಾಗಿರಬೇಕು. ಇಲ್ಲದಿದ್ದರೆ ಜೀವಹಾನಿ ಸಂಭವಿಸುವ ಸಾಧ್ಯತೆ ಇರುತ್ತದೆ.

ಅನಾಹುತದಲ್ಲಿ ಪವಾಡ ಸದೃಶ ರೀತಿಯಲ್ಲಿ ಪಾರಾದ ಎಷ್ಟೋ ಪ್ರಕರಣಗಳ ಬಗ್ಗೆ ಕೇಳಿದ್ದೇವೆ. ಸೋಮಾಲಿಯಾದಲ್ಲಿ ಹಾರಾಡುತ್ತಿದ್ದ ವಿಮಾನದಲ್ಲಿ ಸ್ಪೋಟವುಂಟಾಗಿ ವಿಮಾನದ ಮೇಲ್ಬಾಗ ಕಿತ್ತುಹೋದರೂ ಪ್ರಯಾಣಿಕರು, ಸಿಬ್ಬಂದಿ ಪವಾಡಸದೃಶ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ. 74 ಪ್ರಯಾಣಿಕರಿದ್ದ ದಾಲ್ಲೂ ಏರ್ ಲೈನ್ಸ್ ಗೆ ಸೇರಿದ ವಿಮಾನ ಸೋಮಾಲಿಯಾದ ಮೊಗದಿಶು ವಿಮಾನ ನಿಲ್ದಾಣದಿಂದ ಆಫ್ರಿಕಾದ ಜಿಬೌತ್ ಗೆ ಹೊರಟಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಮೊಗದಿಶು ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನ ಹಾರಾಟ ನಡೆಸುವಾಗ ಇದ್ದಕ್ಕಿದ್ದಂತೆ ಸ್ಪೋಟ ಸಂಭವಿಸಿದೆ. ಇದರಿಂದ ವಿಮಾನದ ಮೇಲ್ಮೈನ ಒಂದು ಭಾಗ ಕಿತ್ತು ಹೋಗಿದ್ದು, ಕೂಡಲೇ ಪೈಲಟ್ ವಿಮಾನವನ್ನು ಸುರಕ್ಷಿತವಾಗಿ ಕೆಳಕ್ಕೆ ಇಳಿಸಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಉಳಿದೆಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...