alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಕರ್ಟ್ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಮೋದಿ

modi hjkl j 8

ವಾಷಿಂಗ್ಟನ್: ಪಂಚರಾಜ್ಯಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ದೇಶಗಳ ಪ್ರವಾಸ ಮುಗಿಸಿ ಅಮೆರಿಕದಲ್ಲಿದ್ದಾರೆ. ಈ ಸಂದರ್ಭದಲ್ಲಿ ಅವರು ನೀಡಿದ ಹೇಳಿಕೆಯೊಂದು ಅಚ್ಚರಿ ಮೂಡಿಸಿದೆ.

ಪ್ರಧಾನಿ ಮೋದಿ ಅವರು ವಾಷಿಂಗ್ಟನ್ ನಲ್ಲಿ ಆಯೋಜಿಸಲಾಗಿದ್ದ ಸಮಾರಂಭವೊಂದರಲ್ಲಿ ಮಾತನಾಡುವಾಗ, ಹಿಂದಿನಿಂದಲೂ ಭಾರತೀಯರು ಸ್ಕರ್ಟ್ ಧರಿಸುತ್ತಿದ್ದರು ಎಂದು ಹೇಳಿದ್ದಾರೆ. 13ನೇ ಶತಮಾನದ ಕೊನಾರ್ಕ್ ಸೂರ್ಯ ದೇವಾಲಯದಲ್ಲಿ ಹೆಣ್ಣುಮಕ್ಕಳು ಸ್ಕರ್ಟ್ ಧರಿಸಿ, ಕೈಯಲ್ಲಿ ಪರ್ಸ್ ಹಿಡಿದುಕೊಂಡಿರುವ ಶಿಲ್ಪಗಳಿವೆ ಎಂದು ಅವರು ತಿಳಿಸಿದ್ದಾರೆ.

ಹಿಂದಿನಿಂದಲೂ ಭಾರತೀಯರು ಸ್ಕರ್ಟ್ ಧರಿಸುತ್ತಿದ್ದರು. ಅದೀಗ ಮಾಡರ್ನ್ ಉಡುಗೆ ಎಂದೇ ಬಿಂಬಿತವಾಗಿದೆ ಎಂದಿದ್ದಾರೆ. ಹೆಣ್ಣು ಮಕ್ಕಳು ಜೀನ್ಸ್, ಸ್ಕರ್ಟ್ ಧರಿಸುವುದನ್ನು ನಿಷೇಧಿಸಬೇಕೆಂದು ಕೆಲವರು ಒತ್ತಾಯಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮೋದಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದು, ಇದಕ್ಕೆ ಯಾವ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂಬುದನ್ನು ಕಾದುನೋಡಬೇಕಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...