alex Certify
ಕನ್ನಡ ದುನಿಯಾ       Mobile App
       

Kannada Duniya

ಉಗ್ರ ಬುರ್ಹಾನ್ ವಾನಿ ಹತ್ಯೆಗೆ ಪ್ರಧಾನಿ ಬೇಸರ

navaz

ಇಸ್ಲಾಮಾಬಾದ್: ಜಮ್ಮು ಕಾಶ್ಮೀರದಲ್ಲಿ ಹಿಜ್ ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಬುರ್ಹಾನ್ ವಾನಿಯನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದು, ಇದರಿಂದಾಗಿ ಆಕ್ರೋಶ ಗೊಂಡಿರುವ ಪ್ರತ್ಯೇಕತಾವಾದಿಗಳು ಹಿಂಸಾಚಾರ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರು, ಬುರ್ಹಾನ್ ವಾನಿ ಹತ್ಯೆಯಿಂದ ಆಘಾತವಾಗಿದೆ ಎಂದು ಹೇಳಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಬುರ್ಹಾನ್ ವಾನಿ ಹತ್ಯೆ ಖಂಡಿಸಿ, ಹೋರಾಟ ನಡೆಸುತ್ತಿರುವ ನಾಗರಿಕರ ಮೇಲೆ ಭಾರತೀಯ ಸೇನೆ ಬಲಪ್ರಯೋಗ ಮಾಡಿದೆ. ಹಲವು ನಾಗರಿಕರನ್ನು ಹತ್ಯೆ ಮಾಡಿದೆ. ಇದರಿಂದ ಆಘಾತವಾಗಿದೆ ಎಂದು ಹೇಳಿದ್ದಾರೆ. ನವಾಜ್ ಷರೀಫ್, ಬುರ್ಹಾನ್ ವಾನಿ ಹತ್ಯೆಯಿಂದ ಆಘಾತವಾಗಿದೆ ಎಂದಿರುವುದಕ್ಕೆ ಭಾರತ ತಿರುಗೇಟು ನೀಡಿದೆ.

ನೆರೆ ದೇಶಗಳ ಆಂತರಿಕ ವಿಚಾರದಲ್ಲಿ ಪಾಕಿಸ್ತಾನ ತಲೆ ಹಾಕಬಾರದು ಎಂದು ಹೇಳಿರುವ ವಿದೇಶಾಂಗ ಸಚಿವಾಲಯ, ಇದು ಭಯೋತ್ಪಾದನೆಯೊಂದಿಗೆ ಪಾಕಿಸ್ತಾನ ಹೊಂದಿರುವ ಸಂಬಂಧವನ್ನು ಎತ್ತಿ ತೋರಿಸುವಂತಿದೆ ಎಂದು ಹೇಳಿಕೆ ನೀಡಿದೆ. ಕೇಂದ್ರ ಸಚಿವರಾದ ವೆಂಕಯ್ಯನಾಯ್ಡು ಹಾಗೂ ಜಿತೇಂದ್ರ ಸಿಂಗ್ ಅವರು, ಕಾಶ್ಮೀರದಲ್ಲಿ ನಡೆದ ಹಿಂಸಾಚಾರದಲ್ಲಿ ಪಾಕ್ ಪಾತ್ರವಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...