alex Certify
ಕನ್ನಡ ದುನಿಯಾ       Mobile App
       

Kannada Duniya

ಸಿನಿಮೀಯ ರೀತಿಯಲ್ಲಿ ಜೈಲಿಂದ ಪರಾರಿಯಾದ ಉಗ್ರರು

jail-baren

ಬಹರೈನ್: ಜೈಲಿನ ಮೇಲೆ ಸಿನಿಮೀಯ ರೀತಿಯಲ್ಲಿ ದಾಳಿ ಮಾಡಿದ ಉಗ್ರರು, ತಮ್ಮ ಸಹಚರರನ್ನು ಕರೆದೊಯ್ದಿದ್ದಾರೆ.

ಬಹರೈನ್ ದಕ್ಷಿಣ ಪ್ರಾಂತ್ಯದ ಜಾವ್ ಕೇಂದ್ರ ಕಾರಾಗೃಹದ ಮೇಲೆ ಸಶಸ್ತ್ರಧಾರಿಗಳು ದಾಳಿ ಮಾಡಿದ್ದಾರೆ. ಜೈಲಿನ ಭದ್ರತಾ ಸಿಬ್ಬಂದಿಯೊಬ್ಬರನ್ನು ಹತ್ಯೆ ಮಾಡಿ, ಶಿಕ್ಷೆ ಅನುಭವಿಸುತ್ತಿದ್ದ ಉಗ್ರರನ್ನು ಕರೆದುಕೊಂಡು ಪರಾರಿಯಾಗಿದ್ದಾರೆ.

ಭಯೋತ್ಪಾದನೆ ಚಟುವಟಿಕೆ ನಡೆಸಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಗಳು ಕಾರಾಗೃಹದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಜೈಲಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಳಿಕ ಹೈ ಅಲರ್ಟ್ ಘೋಷಿಸಲಾಗಿದ್ದು, ಪರಾರಿಯಾದ ಉಗ್ರರ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...