alex Certify
ಕನ್ನಡ ದುನಿಯಾ       Mobile App
       

Kannada Duniya

ಟೆಕ್ಕಿ ಪ್ರಭಾ ಕೊಲೆ ಪ್ರಕರಣದಲ್ಲಿ ಪರಿಚಿತನೇ ಭಾಗಿ..?

prabha-kumar-480

ಮೆಲ್ಬೋರ್ನ್: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ 2015 ರಲ್ಲಿ ದುಷ್ಕರ್ಮಿಯಿಂದ ಹತ್ಯೆಯಾದ ಕರ್ನಾಟಕದ ಪ್ರಭಾ ಅರುಣ್ ಕುಮಾರ್ ಅವರ ಕೊಲೆ ಪ್ರಕರಣದಲ್ಲಿ ಆಕೆಯ ಪರಿಚಯದವರೇ ಭಾಗಿಯಾಗಿದ್ದಾರೆಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಅದರಲ್ಲಿಯೂ ಭಾರತ ಮೂಲದವರೇ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಪ್ರಭಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಟ್ರೇಲಿಯಾ ಪೊಲೀಸರು ಇದುವರೆಗೆ ಸುಮಾರು 2000 ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೇ, 250 ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಇದರ ಆಧಾರದ ಮೇಲೆ ಅವರನ್ನು ಪರಿಚಿತ ಭಾರತೀಯ ಮೂಲದ ವ್ಯಕ್ತಿಗಳೇ ಕೊಲೆ ಮಾಡಿಸಿರಬಹುದೆಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸಿದ್ದು, ಇದುವರೆಗೂ ಹತ್ಯೆಗೆ ಬಳಸಿದ ಆಯುಧ ಪತ್ತೆಯಾಗಿಲ್ಲ.

ಅಲ್ಲದೇ, ಈ ಪ್ರದೇಶದಲ್ಲಿ ಅಳವಡಿಸಿರುವ ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳೂ ಕೂಡ ಸ್ಪಷ್ಟವಾಗಿಲ್ಲದ ಕಾರಣ, ಆರೋಪಿಯ ಗುರುತು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಮೈಂಡ್ ಟ್ರೀ ಕಂಪನಿಯ ಉದ್ಯೋಗಿಯಾಗಿದ್ದ ಪ್ರಭಾ 2015ರ ಮಾರ್ಚ್ 7 ರಂದು ಪತಿಯೊಂದಿಗೆ ಫೋನ್ ನಲ್ಲಿ ಮಾತನಾಡುತ್ತಾ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅವರನ್ನು ಹತ್ಯೆ ಮಾಡಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...