alex Certify
ಕನ್ನಡ ದುನಿಯಾ       Mobile App
       

Kannada Duniya

ನಿಂತು ಹಾಡದ ಗಾಯಕಿಯ ಗುಂಡಿಕ್ಕಿ ಹತ್ಯೆ

ಕಾರ್ಯಕ್ರಮದಲ್ಲಿ ಹಾಡು ಹೇಳುತ್ತಿದ್ದ ಗಾಯಕಿ ಈ ಸಂದರ್ಭದಲ್ಲಿ ನಿಂತುಕೊಂಡಿಲ್ಲವೆಂಬ ಕ್ಷುಲ್ಲಕ ಕಾರಣಕ್ಕೆ ಆಕೆಯನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಲರ್ಖಾನಾ ಜಿಲ್ಲೆಯಲ್ಲಿ ನಡೆದಿದೆ.

ಕಂಗನಾ ಗ್ರಾಮದಲ್ಲಿ ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಈ ಕೃತ್ಯ ನಡೆದಿದ್ದು, 24 ವರ್ಷದ ಗಾಯಕಿ ಸಮೀನಾ ಗರ್ಭಿಣಿಯಾಗಿದ್ದ ಕಾರಣ ಕುಳಿತುಕೊಂಡೇ ಹಾಡು ಹೇಳುತ್ತಿದ್ದಳು ಎನ್ನಲಾಗಿದೆ.

ಪಾನಮತ್ತನಾಗಿದ್ದ ತಾರೀಕ್ ಅಹ್ಮದ್ ಎಂಬಾತ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಆದರೆ ಸಮೀನಾ ತನ್ನ ಬೇಡಿಕೆಗೆ ಸ್ಪಂದಿಸಲಿಲ್ಲವೆಂಬ ಕಾರಣಕ್ಕೆ ಆಕೆಯ ಮೇಲೆ ಗುಂಡು ಹಾರಿಸಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ಸಮೀನಾಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದಾಳೆ. ತನ್ನ ಪತ್ನಿ ಜೊತೆ ಹುಟ್ಟಲಿರುವ ಮಗುವೂ ಸಾವನ್ನಪ್ಪಿರುವುದರಿಂದ ಆರೋಪಿ ವಿರುದ್ದ ಎರಡು ಹತ್ಯೆ ಪ್ರಕರಣಗಳನ್ನು ದಾಖಲಿಸಬೇಕೆಂದು ಸಮೀನಾ ಪತಿ ಆಗ್ರಹಿಸಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...