alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಚಾರದ ವೇಳೆ ಅಧ್ಯಕ್ಷೀಯ ಅಭ್ಯರ್ಥಿಗೆ ಚಾಕು ಇರಿತ

ಬ್ರೆಜಿಲ್ ನಲ್ಲಿ ಅಧ್ಯಕ್ಷೀಯ ಚುನಾವಣೆ ಹಿಂಸಾರೂಪ ತಾಳಿದೆ. ಅಧ್ಯಕ್ಷೀಯ ಅಭ್ಯರ್ಥಿ jair bolsonaro ಮೇಲೆ ಪ್ರಚಾರದ ವೇಳೆ ದಾಳಿ ನಡೆದಿದೆ. ದುಷ್ಕರ್ಮಿಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.ಗಂಭೀರ ಸ್ಥಿತಿಯಲ್ಲಿರುವ jair bolsonaro ಅವ್ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಭಿಮಾನಿಗಳು jair bolsonaro ಅವ್ರನ್ನು ಭುಜದ ಮೇಲೆ ಹೊತ್ತುಕೊಂಡು ಪ್ರಚಾರ ಮಾಡ್ತಿದ್ದರು.ಈ ವೇಳೆ ಅವ್ರ ಹೊಟ್ಟೆಗೆ ಚಾಕುವಿನಿಂದ ಇರಿಯಲಾಗಿದೆ. jair bolsonaro ಪ್ರಜ್ಞೆ ತಪ್ಪಿದ್ದು,ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. jair bolsonaro ಆರೋಗ್ಯದ ಬಗ್ಗೆ ಸ್ಪಷ್ಟ ವರದಿ ಸಿಕ್ಕಿಲ್ಲ. ಚಾಕು ಇರಿತಕ್ಕೆ ಕಾರಣವೇನು ಎಂಬುದು ಗೊತ್ತಾಗಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ. jair bolsonaro ಯಕೃತ್ತು,ಶ್ವಾಸಕೋಶ ಮತ್ತು ಕರುಳಿಗೆ ಹಾನಿಯಾಗಿದೆಯಂತೆ. ತುಂಬಾ ರಕ್ತ ಸೋರಿಕೆಯಾಗಿದೆ ಎಂದು jair bolsonaro ಮಗ ಹೇಳಿಕೆ ನೀಡಿದ್ದಾರೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದು,ಮೊದಲಿಗಿಂತ ಈಗ ಪರಿಸ್ಥಿತಿ ಸುಧಾರಿಸಿದೆ ಎಂದು ಟ್ವಿಟ್ ಮಾಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...