alex Certify
ಕನ್ನಡ ದುನಿಯಾ       Mobile App
       

Kannada Duniya

ಚೀನಾದಲ್ಲಿ ಭಾರೀ ಹಿಮಪಾತ: ರೈಲು ನಿಲ್ದಾಣದಲ್ಲಿ ಸಿಲುಕಿದ ಪ್ರಯಾಣಿಕರು

399ff8043e1c468bb07110f9892e9dff

ಚೀನಾದಲ್ಲಿ ಭಾರೀ ಪ್ರಮಾಣದ ಹಿಮಪಾತವಾಗುತ್ತಿದ್ದು, ಹಾಗಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. 50 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಇಲ್ಲಿನ ಗುವಾನ್‌ ಝೋವು ರೈಲು ನಿಲ್ದಾಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಮೂರು ದಿನಗಳಿಂದ ಪೂರ್ವ ಹಾಗೂ ದಕ್ಷಿಣ ಚೀನಾದ ಹಲವೆಡೆ ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದು, ಹೀಗಾಗಿ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಇದರಿಂದ ವಿವಿಧ ನಗರಗಳಿಗೆ ತೆರಳಬೇಕಿದ್ದ 1,75,000 ಪ್ರಯಾಣಿಕರು ಅತಂತ್ರರಾಗಿದ್ದು, ನಿಲ್ದಾಣಗಳಲ್ಲಿಯೇ ಬೀಡು ಬಿಟ್ಟಿದ್ದಾರೆ. ಅಲ್ಲದೇ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಮಿತಿಮೀರಿದ್ದು, ಅವರನ್ನು ನಿಯಂತ್ರಿಸಲು ಜಿಲ್ಲಾಡಳಿತ 6,500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದೆ.

ಕೆಲವೆಡೆ ಬಸ್ ಗಳ ಮೂಲಕ ಪ್ರಯಾಣಿಕರ ವ್ಯವಸ್ಥೆಗೆ ಅನುವು ಮಾಡಿಕೊಡಲಾಗಿದ್ದು, ಕೆಲವು ರೈಲುಗಳ ಮಾರ್ಗದಲ್ಲಿಯೂ ಬದಲಾವಣೆಯಾಗಿದೆ. ಒಟ್ಟಾರೆ ಈ ಹಿಮಪಾತ ಅಲ್ಲಿನ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...