alex Certify
ಕನ್ನಡ ದುನಿಯಾ       Mobile App
       

Kannada Duniya

ತ್ರಿವರ್ಣದಲ್ಲಿ ಕಂಗೊಳಿಸಿದ ಬುರ್ಜ್ ಖಲೀಫಾ

kalifa

ದುಬೈ: ಭಾರತ 68 ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿದೆ. ಈ ಬಾರಿ ಗಣ ರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅಬುಧಾಬಿಯ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಆಗಮಿಸಿದ್ದಾರೆ.

ನವದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಹ್ಯಾನ್ ಅವರನ್ನು, ಶಿಷ್ಟಾಚಾರ ಬದಿಗೊತ್ತಿ ಪ್ರಧಾನಿ ನರೇಂದ್ರ ಮೋದಿ ಅವರೇ ಬರಮಾಡಿಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ಭಾರತ ಮತ್ತು ಸಂಯುಕ್ತ ಅರಬ್ ಒಕ್ಕೂಟ(ಯು.ಎ.ಇ.) ನಡುವೆ ಹಲವು ಒಪ್ಪಂದಗಳಾಗಿವೆ.

ಗಣರಾಜ್ಯೋತ್ಸವ ಸಂಭ್ರಮದಲ್ಲಿರುವ ಭಾರತಕ್ಕೆ ಮುಖ್ಯ ಅತಿಥಿಯಾಗಿ ಅಬುದಾಭಿ ಯುವರಾಜ ಆಗಮಿಸಿದ್ದರೆ, ವಿಶ್ವದ ಅತ್ಯಂತ ಎತ್ತರವಾದ ಕಟ್ಟಡ ಬುರ್ಜ್ ಖಲೀಫಾದಲ್ಲಿ ತ್ರಿವರ್ಣ ರಾರಾಜಿಸಿದೆ.

ಭಾರತದ ರಾಷ್ಟ್ರಧ್ವಜದ ಕೇಸರಿ, ಬಿಳಿ, ಹಸಿರು ಕಲರ್ ನ ಎಲ್.ಇ.ಡಿ. ಲೈಟ್ ನಲ್ಲಿ ಬುರ್ಜ್ ಖಲೀಫಾ ಕಂಗೊಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...