alex Certify
ಕನ್ನಡ ದುನಿಯಾ       Mobile App
       

Kannada Duniya

ಭ್ರಷ್ಟಾಚಾರ: ರಾಜಮನೆತನದವರು, ಸಚಿವರು ಅರೆಸ್ಟ್

ರಿಯಾದ್: ಸೌದಿ ಅರೇಬಿಯಾದಲ್ಲಿ ಭ್ರಷ್ಟಾಚಾರ ನಿಗ್ರಹ ಸಮಿತಿಯಿಂದ ನಡೆಸಲಾದ ಮಹತ್ವದ ಕಾರ್ಯಾಚರಣೆಯಲ್ಲಿ ಯುವರಾಜರು ಸೇರಿ ರಾಜಮನೆತನದ 11 ಮಂದಿ, ಹಲವಾರು ಮಂದಿ ಹಾಲಿ ಮತ್ತು ಮಾಜಿ ಸಚಿವರನ್ನು ಬಂಧಿಸಲಾಗಿದೆ.

ನೂತನ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಭ್ರಷ್ಟಾಚಾರ ನಿಗ್ರಹ ಸಮಿತಿಯನ್ನು ರಚಿಸಿದ್ದು, ಸಮಿತಿಗೆ ಅವರೇ ಮುಖ್ಯಸ್ಥರಾಗಿದ್ದಾರೆ. ಈ ಸಮಿತಿಯ ಮೂಲಕ ವಿರೋಧಿಗಳನ್ನು ಹತ್ತಿಕ್ಕಲು ಕಾರ್ಯಾಚರಣೆ ಆರಂಭಿಸಿ ಅಧಿಕಾರ ಕೇಂದ್ರೀಕರಣದತ್ತ ಗಮನ ನೀಡಿದ್ದಾರೆ.

ಅಧಿಕಾರ ದುರ್ಬಳಕೆ ಮಾಡಿಕೊಂಡು ಸಾರ್ವಜನಿಕ ಹಣ ಲೂಟಿ ಮಾಡಿದ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿದೆ. ಗಣ್ಯರು ದೇಶವನ್ನು ಬಿಟ್ಟು ಹೋಗದಂತೆ ತಡೆಯಲು ಖಾಸಗಿ ಜೆಟ್ ವಿಮಾನಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಮಹತ್ವದ ಕಾರ್ಯಾಚರಣೆಯನ್ನು ಧಾರ್ಮಿಕ ಮುಖಂಡರು ಬೆಂಬಲಿಸಿದ್ದು, ಭ್ರಷ್ಟಾಚಾರದ ವಿರುದ್ಧದ ಈ ಕ್ರಮ ಭಯೋತ್ಪಾದನೆ ವಿರುದ್ಧ ಕೈಗೊಂಡ ಕ್ರಮದಷ್ಟೇ ಪ್ರಮುಖವಾದುದಾಗಿದೆ ಎಂದು ಹೇಳಿದ್ದಾರೆ.

ಭ್ರಷ್ಟಾಚಾರ ಆರೋಪದಡಿ ಹಲವರನ್ನು ಬಂಧಿಸಿದ ಬೆನ್ನಲ್ಲೇ ಹಲವು ಸಚಿವರು, ಉನ್ನತ ಹುದ್ದೆಯಲ್ಲಿದ್ದ ಅಧಿಕಾರಿಗಳನ್ನು ಬದಲಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...