alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಬೆಂಕಿ ದುರಂತದಲ್ಲಿ 11 ಮಂದಿ ಸಾವು

fire-soudi

ರಿಯಾದ್: ಸೌದಿ ಅರೇಬಿಯಾದ ನಜ್ರಾನ್ ನಲ್ಲಿ ಸಂಭವಿಸಿದ ಭೀಕರ ಬೆಂಕಿ ದುರಂತದಲ್ಲಿ, 10 ಭಾರತೀಯ ಕೆಲಸಗಾರರು ಸೇರಿ 11 ಮಂದಿ ಸಾವನ್ನಪ್ಪಿದ್ದಾರೆ.

ಭಾರತ, ಬಾಂಗ್ಲಾ ಮೊದಲಾದ ಕಡೆಗಳಿಂದ ಬಂದಿದ್ದ ವಿದೇಶಿ ಕಾರ್ಮಿಕರು ನಜ್ರಾನ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಅಗ್ನಿ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಎ.ಸಿ.ಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ತಗುಲಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ನಜ್ರಾನ್ ಬೆಂಕಿ ದುರಂತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡ ಭಾರತೀಯರ ನೆರವಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ವ್ಯವಹಾರ ಖಾತೆ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...