alex Certify
ಕನ್ನಡ ದುನಿಯಾ       Mobile App
       

Kannada Duniya

ಮೊದಲ ಬಾರಿಗೆ ಸೌದಿ ಮಹಿಳೆಯರಿಂದ ಫುಟ್ಬಾಲ್ ಪಂದ್ಯ ವೀಕ್ಷಣೆ

ಸೌದಿ ಅರೇಬಿಯಾದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರಿಗೆ ಫುಟ್ಬಾಲ್ ಪಂದ್ಯ ವೀಕ್ಷಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಹಲವು ದಶಕಗಳಿಂದ ಇದ್ದ ಲಿಂಗ ತಾರತಮ್ಯಕ್ಕೆ ಬ್ರೇಕ್ ಬಿದ್ದಂತಾಗಿದೆ.

ಕೆಲ ದಿನಗಳ ಹಿಂದಷ್ಟೆ ಮಹಿಳೆಯರಿಗೆ ವಾಹನ ಚಲಾಯಿಸಲು ಅನುಮತಿ ನೀಡಲಾಗಿತ್ತು. ಚಿತ್ರಮಂದಿರಗಳನ್ನು ಕೂಡ ಮತ್ತೆ ತೆರಯಲಾಗಿತ್ತು. ಅದರ ಬೆನ್ನಲ್ಲೇ ಫುಟ್ಬಾಲ್ ಪಂದ್ಯ ವೀಕ್ಷಣೆಗೆ ಮಹಿಳೆಯರಿಗೆ ವಿಧಿಸಿದ್ದ ನಿರ್ಬಂಧ ತೆರವು ಮಾಡಲಾಗಿದೆ.

ಜೆಡ್ಡಾ ಸ್ಟೇಡಿಯಂನಲ್ಲಿ ನಡೆದ ಪಂದ್ಯ ವೀಕ್ಷಿಸಲು ಮಹಿಳೆಯರೆಲ್ಲ ಸಾಂಪ್ರದಾಯಿಕ ಬುರ್ಖಾ ತೊಟ್ಟು ಬಂದಿದ್ದರು. ಕಳೆದ ವರ್ಷ ಅಧಿಕಾರಕ್ಕೆ ಬಂದಾಗಿನಿಂದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಸಾಕಷ್ಟು ಬದಲಾವಣೆಗಳನ್ನು ಮಾಡಿದ್ದಾರೆ.

ಕಳೆದ ವಾರವಷ್ಟೆ ಮಹಿಳೆಯರಿಗೆ ಫುಟ್ಬಾಲ್ ಪಂದ್ಯ ವೀಕ್ಷಿಸಲು ಅನುಮತಿ ಕೊಡುವುದಾಗಿ ಸೌದಿ ಸರ್ಕಾರ ಪ್ರಕಟಿಸಿತ್ತು. ಇದೊಂದು ಐತಿಹಾಸಿಕ ನಿರ್ಧಾರ ಅಂತಾ ಬಣ್ಣಿಸಲಾಗ್ತಿದೆ. ಸೌದಿ ಏರ್ಲೈನ್ಸ್ 5 ಕುಟುಂಬಗಳಿಗೆ ಉಚಿತ ವಿಮಾನದ ಟಿಕೆಟ್ ಕೂಡ ನೀಡಿತ್ತು.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...